ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಈ ಜೋಡಿ ಸೌತ್ ಆಫ್ರಿಕಾ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ 40 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 207 ಕ್ಕೆ ಬಂದು ನಿಂತಿತು.