Shafali Varma: ಸ್ಪೋಟಕ ಸೆಂಚುರಿ: ವಿಶ್ವ ದಾಖಲೆ ಬರೆದ ಶಫಾಲಿ ವರ್ಮಾ

|

Updated on: Jun 28, 2024 | 2:19 PM

India Women vs South Africa Women: ಭಾರತ ಮತ್ತು ಸೌತ್ ಆಫ್ರಿಕಾ ಮಹಿಳಾ ತಂಡಗಳ ನಡುವೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕಳಾಗಿ ಕಣಕ್ಕಿಳಿದಿರುವ ಶಫಾಲಿ ವರ್ಮಾ ಸ್ಪೋಟಕ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 6
ಚೆನ್ನೈನಲ್ಲಿ ನಡೆದ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಟೀಮ್ ಇಂಡಿಯಾ ಬ್ಯಾಟರ್ ಶಫಾಲಿ ವರ್ಮಾ (Shafali Varma) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 40 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಉಡೀಸ್ ಮಾಡುವ ಮೂಲಕ ಎಂಬುದು ವಿಶೇಷ.

2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡಕ್ಕೆ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿ ಸೌತ್ ಆಫ್ರಿಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ 40 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 207 ಕ್ಕೆ ಬಂದು ನಿಂತಿತು.

3 / 6
ಇದರ ನಡುವೆ ಶಫಾಲಿ ವರ್ಮಾ ಕೇವಲ 113 ಎಸೆತಗಳಲ್ಲಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು. ವಿಶೇಷ ಎಂದರೆ ಇದು ಮಹಿಳಾ ಟೆಸ್ಟ್​ನಲ್ಲಿ ಮೂಡಿಬಂದ ಅತೀ ವೇಗದ ಶತಕವಾಗಿದೆ. ಇದರೊಂದಿಗೆ ಮಹಿಳಾ ಟೆಸ್ಟ್​ನಲ್ಲಿ ಸ್ಫೋಟಕ ಸೆಂಚುರಿ ಸಿಡಿಸಿದ ದಾಖಲೆ ಶಫಾಲಿ ವರ್ಮಾ ಪಾಲಾಯಿತು.

4 / 6
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಆಟಗಾರ್ತಿ  ಜಾನೆಟ್ ಬ್ರಿಟಿನ್ ಹೆಸರಿನಲ್ಲಿತ್ತು. 1984 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಬ್ರಿಟಿನ್ 137 ಎಸೆತಗಳಲ್ಲಿ ಸೆಂಚುರಿ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ 40 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಶಫಾಲಿ ವರ್ಮಾ ಯಶಸ್ವಿಯಾಗಿದ್ದಾರೆ.

5 / 6
ಕೇವಲ 113 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ಶಫಾಲಿ ವರ್ಮಾ ಮಹಿಳಾ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ಆಟಗಾರ್ತಿ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಇದೇ ಪಂದ್ಯದಲ್ಲಿ ಸ್ಮೃತಿ ಮಂಧಾನ 122 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಲ್ಲದೆ 161 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 27 ಫೋರ್​ಗಳೊಂದಿಗೆ 149 ರನ್ ಬಾರಿಸಿ ಸ್ಮತಿ ಮಂಧಾನ ವಿಕೆಟ್ ಒಪ್ಪಿಸಿದರು. ಇನ್ನು 60 ಓವರ್​ಗಳ ಮುಕ್ತಾಯದ ವೇಳೆಗೆ ಶಫಾಲಿ ವರ್ಮಾ 170 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 20 ಫೋರ್​ಗಳೊಂದಿಗೆ 165 ರನ್ ಬಾರಿಸಿದ್ದಾರೆ.