AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಪಂದ್ಯದಲ್ಲಿ ಎರಡೆರಡು ವಿಶ್ವ ದಾಖಲೆಗಳನ್ನು ಮುರಿದ ಶಫಾಲಿ ವರ್ಮಾ

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಚಿನ್ನ ತಂದ ಶಫಾಲಿ ವರ್ಮಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಶ್ರೀಲಂಕಾ ವಿರುದ್ಧದ ಫೈನಲ್‌ನಲ್ಲಿ 48 ರನ್ ಗಳಿಸಿ ಮಿಂಚಿದ ಅವರು, ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು T20I ರನ್‌ಗಳು (863) ಮತ್ತು ಅತಿ ಹೆಚ್ಚು ಸಿಕ್ಸರ್‌ಗಳು (38) ಬಾರಿಸಿದ ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಲಾರಾ ವಾಲ್ವೂರ್ಟ್ ಮತ್ತು ಚಾಮರಿ ಅಟಪಟ್ಟು ಅವರ ದಾಖಲೆಗಳನ್ನು ಮುರಿದು, ಶಫಾಲಿ ವರ್ಮಾ ಇತಿಹಾಸ ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Sep 22, 2026 | 10:15 PM

Share
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತದ ಯುವ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಶ್ರೀಲಂಕಾ ವಿರುದ್ಧದ ಚಿನ್ನದ ಪದಕದ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಬೃಹತ್ ಸಿಕ್ಸರ್‌ಗಳ ಸಹಾಯದಿಂದ 48 ರನ್ ಬಾರಿಸಿದರು. ಕೇವಲ 2 ರನ್​ಗಳಿಂದ ಅರ್ಧಶತಕವಂಚಿತರಾದರೂ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ(PC-BCCI Women x).

1 / 6
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಶಫಾಲಿ ವರ್ಮಾ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವರ್ಷ 2026 ರಲ್ಲಿ ಅವರು ಒಟ್ಟು 863 ರನ್‌ಗಳನ್ನು ಕಲೆಹಾಕಿದ್ದು, ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ(PC-BCCI Women x).

2 / 6
ಈ ಮೂಲಕ ಶಫಾಲಿ ವರ್ಮಾ ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವಾಲ್ವೂರ್ಟ್ (824 ರನ್) ಅವರ ದಾಖಲೆಯನ್ನು ಮುರಿದಿದ್ದಾರೆ. ಲಾರಾ ವಾಲ್ವೂರ್ಟ್ ಒಂದೇ ಕ್ಯಾಲೆಂಡರ್ ವರ್ಷದಲ್ಲಿ 824 ರನ್ ಕಲೆಹಾಕುವ ಮೂಲಕ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು. ಆದರೀಗ ಆ ದಾಖಲೆ ಶಫಾಲಿ ಪಾಲಾಗಿದೆ. ಇನ್ನು ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಈ ಪಟ್ಟಿಯಲ್ಲಿದ್ದಾರೆ(PC-BCCI Women x).

3 / 6
ರನ್‌ಗಳ ವಿಷಯದಲ್ಲಿ ಮಾತ್ರವಲ್ಲದೆ, ಸಿಕ್ಸರ್‌ಗಳನ್ನು ಬಾರಿಸುವ ವಿಷಯದಲ್ಲೂ ಶಫಾಲಿ ವರ್ಮಾ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಶ್ರೀಲಂಕಾ ವಿರುದ್ಧ ಅವರು ಹೊಡೆದ 3 ಸಿಕ್ಸರ್‌ಗಳು ಸೇರಿದಂತೆ, ಈ ವರ್ಷವೊಂದರಲ್ಲೇ ಅವರು ಒಟ್ಟು 38 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ(PC-BCCI Women x).

4 / 6
ಈ ಮೂಲಕ ಮಹಿಳಾ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ವರ್ಷದಲ್ಲಿ ಅತ್ಯಧಿಕ ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ, ಅವರು ಶ್ರೀಲಂಕಾದ ನಾಯಕಿ ಚಾಮರಿ ಅಟಪಟ್ಟು (32 ಸಿಕ್ಸರ್‌ಗಳು) ಮತ್ತು ಇತರ ಆಟಗಾರ್ತಿಯರ ದಾಖಲೆಗಳನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಆಗಿದ್ದಾರೆ(PC-BCCI Women x).

5 / 6
ಶಫಾಲಿ ವರ್ಮಾ ಏಷ್ಯನ್ ಗೇಮ್ಸ್ ಟೂರ್ನಿಯಾದ್ಯಂತ ಅತ್ಯುತ್ತಮ ಫಾರ್ಮ್‌ನಲ್ಲಿದ್ದರು. ಆಡಿದ 3 ಪಂದ್ಯಗಳಲ್ಲಿ 188 ರನ್ ಕಲೆಹಾಕಿ ಈ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅವರು ಅಜೇಯ 100 ರನ್, ಜಪಾನ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 15 ಎಸೆತಗಳಲ್ಲಿ 40 ರನ್​ಗಳ ಇನ್ನಿಂಗ್ಸ್ ಆಡಿದ್ದರು(PC-BCCI Women x).

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ