ಟೀಮ್ ಇಂಡಿಯಾಗೆ ಅನುಭವಿ ಆಲ್ ರೌಂಡರ್ ಎಂಟ್ರಿ

Updated on: Dec 16, 2025 | 7:53 AM

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 5 ಪಂದ್ಯಗಳ ಟಿ೨೦ ಸರಣಿಯ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ತಂಡವು ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

1 / 5
ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಿನ ನಾಲ್ಕನೇ ಟಿ೨೦ ಪಂದ್ಯ ನಾಳೆ (ಡಿ.17) ನಡೆಯಲಿದೆ. ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ.

ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ನಡುವಿನ ನಾಲ್ಕನೇ ಟಿ೨೦ ಪಂದ್ಯ ನಾಳೆ (ಡಿ.17) ನಡೆಯಲಿದೆ. ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ.

2 / 5

ಕಟಕ್ ಹಾಗೂ ಮುಲ್ಲನ್ ಪುರ್ ನಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಆಲ್ ರೌಂಡರ್ ಅಕ್ಷರ್ ಪಟೇಲ್ ತಂಡದಿಂದ ಹೊರಗುಳಿದಿದ್ದಾರೆ. ಅನಾರೋಗ್ಯದ ಕಾರಣ ಅಕ್ಷರ್ ಕೊನೆಯ ಎರಡು ಮ್ಯಾಚ್ ಗಳಿಗೆ ಅಲಭ್ಯರಾಗಿದ್ದಾರೆ.

3 / 5

ಇತ್ತ ಅಕ್ಷರ್ ಪಟೇಲ್ ಹೊರಬೀಳುತ್ತಿದ್ದಂತೆ ಆಯ್ಕೆ ಸಮಿತಿಯು ಬಂಗಾಳದ ಸ್ಪಿನ್ ಆಲ್ ರೌಂಡರ್ ಶಹಬಾಝ್ ಅಹ್ಮದ್ ಅವರನ್ನು ಬದಲಿಯಾಗಿ ತಂಡಕ್ಕೆ ಆಯ್ಕೆ ಮಾಡಿದ್ದಾರೆ‌. ಅದರಂತೆ ಇದೀಗ ಲಕ್ನೋನಲ್ಲಿ ಶಹಬಾಝ್ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ.

4 / 5

ಶಹಬಾಝ್ ಅಹ್ಮದ್ ಈ ಹಿಂದೆ ಟೀಮ್ ಇಂಡಿಯಾ ಪರ 2 ಟಿ೨೦ ಹಾಗೂ 3 ಏಕದಿನ ಪಂದ್ಯಗಳನ್ನಾಡಿದ್ದರು. ಈ ವೇಳೆ ಒಟ್ಟು 5 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ 112 ಟಿ೨೦ ಪಂದ್ಯಗಳನ್ನಾಡಿದ ಅನುಭವವನ್ನು ಸಹ ಹೊಂದಿದ್ದಾರೆ. ಹೀಗಾಗಿ ಅಕ್ಷರ್ ಪಟೇಲ್ ಬದಲಿಗೆ ಶಹಬಾಝ್ ಅಹ್ಮದ್ ಅವರನ್ನು ಆಯ್ಕೆ ಮಾಡಲಾಗಿದೆಮ ಅದರಂತೆ ಇದೀಗ 2 ವರ್ಷಗಳ ಬಳಿಕ ಮತ್ತೊಮ್ಮೆ ಶಹಬಾಝ್ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

5 / 5

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಶಹಬಾಝ್ ಅಹ್ಮದ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us