- Kannada News Photo gallery Cricket photos Shaheen Afridi got married to Shahid Afridi's daughter Ansha in a grand ceremony in Karachi
Shaheen Afridi Marriage: ಶಾಹಿದ್ ಅಫ್ರಿದಿ ಮಗಳ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶಾಹೀನ್ ಅಫ್ರಿದಿ: ಫೋಟೋ
Shaheen Afridi Wedding: ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಶಾಹೀನ್ ಶಾ ಅಫ್ರಿದಿ ಅವರು ಪಾಕ್ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಪುತ್ರಿ ಅಂಷಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Updated on: Feb 04, 2023 | 10:52 AM

ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಶಾಹೀನ್ ಶಾ ಅಫ್ರಿದಿ ಅವರು ಪಾಕ್ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಪುತ್ರಿ ಅಂಷಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶುಕ್ರವಾರ ಕರಾಚಿಯಲ್ಲಿ ಈ ಅದ್ದೂರಿ ಕಾರ್ಯಕ್ರಮಕ್ಕೆ ಪಾಕಿಸ್ತಾನ ತಂಡದ ಹಾಲಿ ನಾಯಕ ಬಾಬರ್ ಅಜಮ್ ಸೇರಿದಂತೆ ಕ್ರಿಕೆಟ್ ಲೋಕದ ದಿಗ್ಗಜರು ಭಾಗಿಯಾಗಿದ್ದರು. ಶಾಹೀನ್ ಹಾಗೂ ಅನ್ಶಾ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಇವರಿಬ್ಬರು ಮದುವೆ ಬಗ್ಗೆ ಪಾಕಿಸ್ತಾನ ಸೂಪರ್ ಲೀಗ್ (PSL) ಫ್ಯಾಂಚೈಸಿ, ಲಾಹೋರ್ ಕಾಲಂಡರ್ಸ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ. ಮದುವೆ ಸಂಭ್ರಮದ ಫೋಟೋ ಹಾಗೂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

"ವೈವಾಹಿಕ ಜೀವನಕ್ಕೆ ಕಾಲಿಟ್ಟ ಶಾಹೀನ್ ಶಾ ಅಫ್ರಿದಿ ಅವರಿಗೆ ಲಾಹೋರ್ ಕ್ವಾಲೆಂಡರ್ಸ್ ತಂಡದಿಂದ ಅಭಿನಂದನೆಗಳು," ಎಂದು ತನ್ನ ಅದಿಕೃತ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಪೋಟೋಗೆ ಈ ರೀತಿಯ ಶೀರ್ಷಕೆಯನ್ನು ನೀಡಿದೆ.

ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರಮುಖ ವೇಗಿಯಾಗಿರುವ ಶಾಹೀನ್ ಶಾ ಅಫ್ರಿದಿ ಅವರು ಇಂಗ್ಲೆಂಡ್ ವಿರುದ್ಧ 2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ವೇಳೆ ಮೊಣಕಾಲು ಗಾಯಕ್ಕೆ ತುತ್ತಾಗಿದ್ದರು.

ಸದ್ಯ ಗುಣಮುಖರಾಗಿರುವ ಶಾಹೀನ್ ಸಂಪೂರ್ಣ ಫಿಟ್‌ನೆಸ್ ಮರಳಿದ್ದು, ನೆಟ್ಸ್‌ನಲ್ಲಿ ಬೌಲಿಂಗ್ ಅಭ್ಯಾಸ ನಡೆಸಿದ್ದಾರೆ.
