AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಮೊದಲ ಓವರ್​ನಲ್ಲೇ 2 ಸಿಲ್ವರ್ ಡಕ್: ದಾಖಲೆ ಬರೆದ ಶಾಹೀನ್ ಅಫ್ರಿದಿ

Shaheen Afridi Record: ಕ್ರಿಕೆಟ್ ಪಂದ್ಯದಲ್ಲಿ ಬ್ಯಾಟರ್​ರೊಬ್ಬರು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರೆ ಅದನ್ನು ಗೋಲ್ಡನ್ ಡಕ್. ಎಂದು ಕರೆಯಲಾಗುತ್ತದೆ. ಇನ್ನು ಬ್ಯಾಟ್ಸ್‌ಮನ್ ತನ್ನ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿ ಶೂನ್ಯಕ್ಕೆ ಔಟಾದರೆ, ಅದನ್ನು ಸಿಲ್ವರ್ ಡಕ್ ಎಂದು ಕರೆಯಲಾಗುತ್ತದೆ. ಇದೀಗ ಪಿಎಸ್​ಎಲ್ ಪಂದ್ಯದಲ್ಲಿ ಮೊದಲ ಓವರ್​ನಲ್ಲೇ ಇಬ್ಬರನ್ನು ಸಿಲ್ವರ್ ಡಕ್​ ಔಟ್ ಮಾಡಿ ಶಾಹೀನ್ ಅಫ್ರಿದಿ ವಿಶೇಷ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 16, 2025 | 1:54 PM

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನ 10ನೇ ಸೀಸನ್​ನಲ್ಲಿ ಎಡಗೈ ವೇಗಿ ಶಾಹೀನ್ ಅಫ್ರಿದಿ (Shaheen Afridi) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮೊದಲ ಓವರ್​ನಲ್ಲೇ ಇಬ್ಬರು ಬ್ಯಾಟರ್​ಗಳನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಎಂಬುದು ವಿಶೇಷ. ಕರಾಚಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಹಾಗೂ ಕರಾಚಿ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಲಾಹೋರ್ ಖಲಂದರ್ಸ್ ತಂಡದ ನಾಯಕ ಶಾಹೀನ್ ಅಫ್ರಿದಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಖಲಂದರ್ಸ್ ಪರ ಫಖರ್ ಝಮಾನ್ 76 ರನ್ ಬಾರಿಸಿದರೆ, ಡೇರಿಲ್ ಮಿಚೆಲ್ 75 ರನ್ ಸಿಡಿಸಿದರು. ಈ ಸ್ಪೋಟಕ ಅರ್ಧಶತಕಗಳ ನೆರವಿನೊಂದಿಗೆ ಲಾಹೋರ್ ಖಲಂದರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು.

2 / 6
202 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಕರಾಚಿ ಕಿಂಗ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಶಾಹೀನ್ ಅಫ್ರಿದಿ ಯಶಸ್ವಿಯಾದರು. ಮೊದಲ ಓವರ್​ನ 2ನೇ ಎಸೆತದಲ್ಲಿ ಡೇವಿಡ್ ವಾರ್ನರ್ (0) ವಿಕೆಟ್ ಪಡೆದ ಅಫ್ರಿದಿ, ಆ ಬಳಿಕ ಬಂದ ಜೇಮ್ಸ್​ ವಿನ್ಸ್​ (0) ಅವರನ್ನು 4ನೇ ಎಸೆತದಲ್ಲಿ ಬೌಲ್ಡ್ ಮಾಡಿದರು. 

3 / 6
ಈ ಮೂಲಕ ಶಾಹೀನ್ ಮೊದಲ ಓವರ್​ನಲ್ಲೇ ಇಬ್ಬರು ಬ್ಯಾಟರ್​ಗಳನ್ನು ಪೆವಿಲಿಯನ್​ಗೆ ಕಳುಹಿಸಿದ್ದಾರೆ. ಅದು ಸಹ ಶೂನ್ಯದೊಂದಿಗೆ. ಇದರೊಂದಿಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮೊದಲ ಓವರ್​ನಲ್ಲಿ ಇಬ್ಬರು ದಾಂಡಿಗರನ್ನು ಸಿಲ್ವರ್ ಡಕ್ ಔಟ್ ಮಾಡಿದ ಮೊದಲ ಬೌಲರ್ ಎಂಬ ದಾಖಲೆ ಶಾಹೀನ್ ಅಫ್ರಿದಿ ಪಾಲಾಯಿತು.

4 / 6
ಈ ದಾಖಲೆಯ ಜೊತೆಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮೊದಲ ಓವರ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಹೆಗ್ಗಳಿಕೆಯನ್ಹು ಸಹ ಶಾಹೀನ್ ಅಫ್ರಿದಿ ತಮ್ಮದಾಗಿಸಿಕೊಂಡಿದ್ದಾರೆ. ಪಿಎಸ್​ಎಲ್​ ಇತಿಹಾಸದಲ್ಲಿ ಶಾಹೀನ್ ಅಫ್ರಿದಿ ಮೊದಲ ಓವರ್​ನಲ್ಲಿ ಈವರೆಗೆ 22 ವಿಕೆಟ್ ಕಬಳಿಸಿ ಈ ದಾಖಲೆ ನಿರ್ಮಿಸಿದ್ದಾರೆ.

5 / 6
ಇನ್ನು ಶಾಹೀನ್ ಅಫ್ರಿದಿ ನೀಡಿದ ಈ ಆರಂಭಿಕ ಆಘಾತದಿಂದ ತತ್ತರಿಸಿದ ಕರಾಚಿ ಕಿಂಗ್ಸ್​ ತಂಡವು 19.1 ಓವರ್​ಗಳಲ್ಲಿ 136 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಲಾಹೋರ್ ಖಲಂದರ್ಸ್ ತಂಡವು 65 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಲಾಹೋರ್ ಖಲಂದರ್ಸ್ ತಂಡವು ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

6 / 6
Follow us
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ

ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್

ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ

ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?

ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ