AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಚ್ ಕೈಚೆಲ್ಲಿದ ಕುಲ್ದೀಪ್, ಕೊಹ್ಲಿ..! ಶತಕ ಬಾರಿಸಿದ ಶಾಯ್ ಹೋಪ್

ಗುವಾಹಟಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಭಾರತದ ವಿರುದ್ಧ ತಮ್ಮ ನಾಲ್ಕನೇ ಶತಕ ಬಾರಿಸಿ ಇತಿಹಾಸ ನಿರ್ಮಿಸಿದರು. ವಿರಾಟ್ ಕೊಹ್ಲಿ ಮತ್ತು ಕುಲದೀಪ್ ಯಾದವ್ ಕ್ಯಾಚ್ ಕೈಚೆಲ್ಲಿದ್ದರಿಂದ ಜೀವದಾನ ಪಡೆದ ಹೋಪ್ 90 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಅವರು ಬ್ರಿಯಾನ್ ಲಾರಾ ಅವರ 19 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿ, ವೆಸ್ಟ್ ಇಂಡೀಸ್ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿದವರಲ್ಲಿ ಎರಡನೇ ಸ್ಥಾನ ಪಡೆದರು.

ಪೃಥ್ವಿಶಂಕರ
|

Updated on:Sep 30, 2026 | 5:34 PM

Share
ಗುವಾಹಟಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್ ಇಂಡೀಸ್ ಪರ ನಾಯಕ ಶಾಯ್ ಹೋಪ್ ಭರ್ಜರಿ ಶತಕ ಬಾರಿಸಿದರು. ಇದು ಭಾರತದ ವಿರುದ್ಧ ಹೋಪ್ ಕಲೆಹಾಕಿದ ನಾಲ್ಕನೇ ಏಕದಿನ ಶತವಾಗಿದೆ. 90 ಎಸೆತಗಳಲ್ಲಿ ಶತಕ ಬಾರಿಸಿದ ಹೋಪ್​ಗೆ ಏಳು ವರ್ಷಗಳಲ್ಲಿ ಭಾರತದ ವಿರುದ್ಧ ಇದು ಮೊದಲ ಏಕದಿನ ಶತಕವಾಗಿದೆ(PC-PTI).

1 / 5
2019 ರಲ್ಲಿ ಭಾರತದಲ್ಲಿ ಕೊನೆಯ ಬಾರಿಗೆ ಶತಕ ಬಾರಿಸಿದ್ದ ಹೋಪ್ ಇದೀಗ 7 ವರ್ಷಗಳ ಬರ ನೀಗಿಸಿಕೊಂಡಿದ್ದಾರೆ. ಶಾಯ್ ಹೋಪ್ ಅವರ ಈ ಶತಕದ ಇನ್ನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ ಪಾತ್ರವೂ ಅಪಾರವಾಗಿದೆ. ಏಕೆಂದರೆ ಶಾಯ್ ಹೋಪ್ ನೀಡಿದ ಕ್ಯಾಚ್ ಅನ್ನು ವಿರಾಟ್ ಕೊಹ್ಲಿ ಕೈಚೆಲ್ಲಿದರು. ಆ ಸಮಯದಲ್ಲಿ ಹೋಪ್ ಅರ್ಧಶತಕವನ್ನು ಬಾರಿಸಿರಲಿಲ್ಲ(PC-PTI).

2 / 5
20ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ, ಹೋಪ್ ನೀಡಿದ ಕ್ಯಾಚ್ ಕೈಚೆಲ್ಲಿದರು. ನಮನ್ ಧೀರ್ ಬೌಲಿಂಗ್​ನಲ್ಲಿ ಹೋಪ್ ಲೆಗ್ ಸೈಡ್​ನಲ್ಲಿ ಶಾಟ್ ಹೊಡೆದರು. ಆದರೆ ಶಾರ್ಟ್ ಮಿಡ್ ವಿಕೆಟ್​ನಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ಸರಳ ಕ್ಯಾಚ್ ಕೈಚೆಲ್ಲಿದರು. ಕೊಹ್ಲಿಗೂ ಮುನ್ನ, ಕುಲ್ದೀಪ್ ಯಾದವ್ ಕೂಡ ಹೋಪ್​ಗೆ ಜೀವದಾನ ನೀಡಿದರು. ಈ ಎರಡು ಜೀವದಾನಗಳು ಭಾರತಕ್ಕೆ ಬಲು ದುಬಾರಿಯಾದವು(PC-PTI).

3 / 5
ಮೇಲೆ ಹೇಳಿದಂತೆ ಭಾರತದಲ್ಲಿ ಭಾರತ ತಂಡದ ವಿರುದ್ಧ ಶಾಯ್ ಹೋಪ್ ಬಾರಿಸಿರುವ ನಾಲ್ಕು ಏಕದಿನ ಶತಕ ಇದಾಗಿದೆ. 2018 ರಲ್ಲಿ ಹೋಪ್ ಅಜೇಯ 123 ರನ್ ಬಾರಿಸಿದ್ದರು. ನಂತರ 2019 ರಲ್ಲಿ ಲಕ್ನೋದಲ್ಲಿ ಅಜೇಯ 109 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಬಳಿಕ ಚೆನ್ನೈನಲ್ಲಿ ಅಜೇಯ 102 ರನ್ ಬಾರಿಸಿದ್ದ ಹೋಪ್, ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ 70 ಕ್ಕಿಂತ ಹೆಚ್ಚು ಸರಾಸರಿ ಹೊಂದಿದ್ದಾರೆ(PC-PTI).

4 / 5
ಶಾಯ್ ಹೋಪ್ ಕೇವಲ 151 ಏಕದಿನ ಇನ್ನಿಂಗ್ಸ್‌ಗಳಲ್ಲಿ 20 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್ ಪರ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿದ್ದಾರೆ. ಲಾರಾ ಏಕದಿನ ಪಂದ್ಯಗಳಲ್ಲಿ 19 ಶತಕಗಳನ್ನು ಗಳಿಸಿದ್ದಾರೆ. ಪ್ರಸ್ತುತ, ಕ್ರಿಸ್ ಗೇಲ್ ಏಕದಿನ ಪಂದ್ಯಗಳಲ್ಲಿ 25 ಶತಕಗಳೊಂದಿಗೆ ವೆಸ್ಟ್ ಇಂಡೀಸ್ ಪರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ(PC-PTI).

5 / 5

Published On - 5:33 pm, Wed, 30 September 26

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ

4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ

ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ

ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!