IPL 2025: ಈ ಸಲ ಕಪ್ ಇವರದ್ದೇ ಎಂದ ಶೇನ್ ವಾಟ್ಸನ್
IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.
Updated on: Jun 02, 2025 | 1:55 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಜೂ.3) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ.

ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಉತ್ತರ ನೀಡಿದ್ದಾರೆ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾಟ್ಸನ್. ವಾಟ್ಸನ್ ಪ್ರಕಾರ, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವುದು ಖಚಿತ.

ಈ ಬಾರಿಯ ಟೂರ್ನಿಯಲ್ಲಿ ಆರ್ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಕೊನೆಯ ಕೆಲ ಪಂದ್ಯಗಳಲ್ಲಿ ರಾಯಲ್ ಪಡೆ ತಪ್ಪುಗಳನ್ನು ಎಸೆಗಿತ್ತು. ಆದರೆ ಪ್ಲೇಆಫ್ ಹಂತದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದೆ. ಅದರಲ್ಲೂ ಜೋಶ್ ಹೇಝಲ್ವುಡ್ ಎಂಟ್ರಿಯಿಂದ ಆರ್ಸಿಬಿ ಬಲ ಹೆಚ್ಚಿದೆ.

ಹೀಗಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಎತ್ತಿ ಹಿಡಿಯುವುದನ್ನು ಎದುರು ನೋಡಬಹುದು. ಅಲ್ಲದೆ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಲಿದ್ದಾರೆ ಎಂದು ಶೇನ್ ವಾಟ್ಸನ್ ಭವಿಷ್ಯ ನುಡಿದಿದ್ದಾರೆ.

ಅದರಂತೆ ಜೂನ್ 3 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




