IPL 2025: ಈ ಸಲ ಕಪ್ ಇವರದ್ದೇ ಎಂದ ಶೇನ್ ವಾಟ್ಸನ್

Updated on: Jun 02, 2025 | 1:55 PM

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಜೂ.3) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ನಾಳೆ (ಜೂ.3) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿವೆ.

2 / 5

ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬುದೇ ಈಗ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಉತ್ತರ ನೀಡಿದ್ದಾರೆ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾಟ್ಸನ್​.  ವಾಟ್ಸನ್ ಪ್ರಕಾರ, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವುದು ಖಚಿತ.

3 / 5

ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಇದಾಗ್ಯೂ ಕೊನೆಯ ಕೆಲ ಪಂದ್ಯಗಳಲ್ಲಿ ರಾಯಲ್ ಪಡೆ ತಪ್ಪುಗಳನ್ನು ಎಸೆಗಿತ್ತು. ಆದರೆ ಪ್ಲೇಆಫ್ ಹಂತದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದೆ. ಅದರಲ್ಲೂ ಜೋಶ್ ಹೇಝಲ್​ವುಡ್ ಎಂಟ್ರಿಯಿಂದ ಆರ್​ಸಿಬಿ ಬಲ ಹೆಚ್ಚಿದೆ.

4 / 5

ಹೀಗಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಎತ್ತಿ ಹಿಡಿಯುವುದನ್ನು ಎದುರು ನೋಡಬಹುದು. ಅಲ್ಲದೆ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಲಿದ್ದಾರೆ ಎಂದು ಶೇನ್ ವಾಟ್ಸನ್ ಭವಿಷ್ಯ ನುಡಿದಿದ್ದಾರೆ.

5 / 5

ಅದರಂತೆ ಜೂನ್ 3 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಿದೆ.

Loading...
Unable to load recommendations.
Follow Us