
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಮೂರನೇ ಟಿ20 ಮಳೆಯಿಂದಾಗಿ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ ಟೈ ಆದ ಪರಿಣಾಮ ಟೀಮ್ ಇಂಡಿಯಾ 1-0 ಅಂತರದಿಂದ ಸರಣಿ ವಶಪಡಿಸಿಕೊಂಡಿತು. ಇದೀಗ ಟಿ20 ಫೀವರ್ ಮುಗಿದಿದ್ದು ಏಕದಿನ ಸರಣಿಗೆ ಉಭಯ ತಂಡಗಳು ಸಜ್ಜಾಗುತ್ತಿದೆ.

ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸುತ್ತಿದ್ದಾರೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಕೆಲ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಇದೀಗ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಹಾಗೂ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಏಕದಿನ ಸರಣಿಯ ಟ್ರೋಫಿಯನ್ನು ಅನಾವರಣ ಮಾಡಿದ್ದಾರೆ.

ಈ ಪಂದ್ಯದ ಬಗ್ಗೆ ಮಾತನಾಡಿರುವ ನಾಯಕ ಧವನ್, ನಾವು ಈ ಎಲ್ಲ ಸಿದ್ಧತೆಯನ್ನು ಮುಂದಿನ ಏಕದಿನ ವಿಶ್ವಕಪ್ಗಾಗಿ ಮಾಡುತ್ತಿದ್ದೇವೆ. ಇಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಾರೊ ಅವರು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ನನ್ನ ಗುರಿ ಕೂಡ ವಿಶ್ವಕಪ್ ಆಡುವುದು ಎಂದು ಧವನ್ ಹೇಳಿದ್ದಾರೆ.

ಉತ್ತಮ ಕ್ರಿಕೆಟ್ ಆಡಿ ಸರಣಿಯನ್ನು ವಶಪಡಿಸಿಕೊಳ್ಳುವುದು ನಮ್ಮ ಗುರಿ. ನ್ಯೂಜಿಲೆಂಡ್ಗೆ ಬಂದು ಇಲ್ಲಿನ ವಾತಾವರಣ, ಪಿಚ್ನಲ್ಲಿ ಆಡುವುದು ಯುವ ಆಟಗಾರರಿಗೆ ಒಳ್ಳೆಯ ಅನುಭವ ನೀಡುತ್ತದೆ. ನಮ್ಮ ಸಾಮರ್ಥ್ಯವನ್ನು ತೊರ್ಪಡಿಸಲು ಇದೊಂದು ಉತ್ತಮ ಅವಕಾಶ ಎಂಬುದು ಶಿಖರ್ ಧವನ್ ಮಾತು.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ನವೆಂಬರ್ 25 ಶುಕ್ರವಾರದಂದು ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ಟಾಸ್ ಪ್ರಕ್ರಿಯೆ 6:30ಕ್ಕೆ ನಡೆಯಲಿದೆ. ನೇರಪ್ರಸಾರ ಡಿಡಿ ಸ್ಪೋರ್ಟ್ಸ್ ಮತ್ತು ಅಮೆಜಾನ್ ಪ್ರೈಮ್ನಲ್ಲಿ ಇರಲಿದೆ.

ಭಾರತ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪ ನಾಯಕ & ವಿಕೆಟ್ ಕೀಪರ್), ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಆಡಮ್ ಮಿಲ್ನ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ.
Published On - 9:21 am, Thu, 24 November 22