Shikhar Dhawan: ಶಿಖರ್ ಧವನ್ ಹೆಸರಿನಲ್ಲಿರುವ ಭರ್ಜರಿ ದಾಖಲೆಗಳ ಪಟ್ಟಿ ಇಲ್ಲಿದೆ
TV9 Web | Updated By: ಝಾಹಿರ್ ಯೂಸುಫ್
Updated on:
Aug 24, 2024 | 10:15 AM
Shikhar Dhawan: ಶಿಖರ್ ಧವನ್ ಪ್ರಮುಖ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನದೊಂದಿಗೆ ಗಮನ ಸೆಳೆದ ಆಟಗಾರ. 2013ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮತ್ತು 2015ರ ಏಕದಿನ ವಿಶ್ವಕಪ್ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ್ದು ಶಿಖರ್ ಧವನ್. ಹಾಗೆಯೇ 2017ರ ಚಾಂಪಿಯನ್ಸ್ ಟ್ರೋಫಿ ಹಾಗೂ 2018ರ ಏಷ್ಯಾಕಪ್ ಟೂರ್ನಿಯಲ್ಲೂ ಧವನ್ ಗರಿಷ್ಠ ಸ್ಕೋರರ್ ಆಗಿ ಹೊರಹೊಮ್ಮಿದ್ದರು.
1 / 8
ಭಾರತ ತಂಡದ ಎಡಗೈ ದಾಂಡಿಗ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಶನಿವಾರ ಸೋಷಿಯಲ್ ಮೀಡಿಯಾ ಮೂಲಕ ಧವನ್ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್ಗೆ ವಿದಾಯ ಹೇಳುತ್ತಿರುವುದಾಗಿ ತಿಳಿಸಿದ್ದಾರೆ.
2 / 8
2010 ರಲ್ಲಿ ಟೀಮ್ ಇಂಡಿಯಾಗೆ ಪಾದರ್ಪಣೆ ಮಾಡುವ ಮೂಲಕ ಇಂಟರ್ನ್ಯಾಷನಲ್ ಕೆರಿಯರ್ ಆರಂಭಿಸಿದ್ದ ಧವನ್ 12 ವರ್ಷಗಳಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳೊಂದಿಗೆ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹಾಗಿದ್ರೆ ಧವನ್ ಹೆಸರಿನಲ್ಲಿರುವ ವಿಶೇಷ ದಾಖಲೆಗಳಾವುವು ಎಂದು ನೋಡೋಣ...
3 / 8
ಐಸಿಸಿ ಏಕದಿನ ಟೂರ್ನಿಯಲ್ಲಿ ಅತೀ ವೇಗವಾಗಿ 1000 ರನ್ ಕಲೆಹಾಕಿದ ವಿಶ್ವ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದೆ. ಧವನ್ ಕೇವಲ 16 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದ್ದಾರೆ.
4 / 8
ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ವಿಶೇಷ ದಾಖಲೆ ಕೂಡ ಶಿಖರ್ ಧವನ್ ಹೆಸರಿನಲ್ಲಿದೆ. 2013 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 187 ರನ್ ಸಿಡಿಸಿ ಎಡಗೈ ದಾಂಡಿಗ ಈ ದಾಖಲೆ ಬರೆದಿದ್ದಾರೆ.
5 / 8
100ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆ ಕೂಡ ಶಿಖರ್ ಧವನ್ ಹೆಸರಿನಲ್ಲಿದೆ. ಗಬ್ಬರ್ ಖ್ಯಾತಿಯ ಧವನ್ 2018 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿದು ಭರ್ಜರಿ ಸೆಂಚುರಿ ಸಿಡಿಸಿ ಈ ಸಾಧನೆ ಮಾಡಿದ್ದಾರೆ.
6 / 8
ಇದಲ್ಲದೆ ಅಂಡರ್-19 ವಿಶ್ವಕಪ್ನಲ್ಲಿ 505 ರನ್ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಧವನ್ ಪಾತ್ರರಾಗಿದ್ದರು. 2004 ರ ಕಿರಿಯರ ವಿಶ್ವಕಪ್ನಲ್ಲಿ 7 ಇನಿಂಗ್ಸ್ಗಳಿಂದ 505 ರನ್ ಸಿಡಿಸಿ ಈ ದಾಖಲೆ ಬರೆದಿದ್ದಾರೆ.
7 / 8
ಐಸಿಸಿ ಏಕದಿನ ಟೂರ್ನಿಯಲ್ಲಿ 65ರ ಸರಾಸರಿಯಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಶಿಖರ್ ಧವನ್ ಹೆಸರಿನಲ್ಲಿದೆ. ಧವನ್ 16 ಇನಿಂಗ್ಸ್ಗಳ ಮೂಲಕ ಈ ಸಾಧನೆ ಮಾಡಿದ್ದಾರೆ.
8 / 8
ಅಂದಹಾಗೆ 2013ರಲ್ಲಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಶಿಖರ್ ಧವನ್. ಈ ಟೂರ್ನಿಯಲ್ಲಿ 114(94), 102*(107), 48(41), 68(92), 31(24), 68(65), 125(128), 78(83), 46( 34), 21(22) ರನ್ ಕಲೆಹಾಕಿದ್ದರು. ಇದು ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವಾಗಿದೆ.