- Kannada News Photo gallery Cricket photos Shimron hetmyer breaks Chris Gayle's Record in T20 World Cup 2026
ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್
Shimron Hetmyer Records: ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ 36 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 64 ರನ್ ಬಾರಿಸಿದ್ದರು. ಈ ಭರ್ಜರಿ ಅರ್ಧಶತಕದೊಂದಿಗೆ ಹೆಟ್ಮೆಯರ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.
Updated on: Feb 09, 2026 | 8:24 AM

ಟಿ20 ವಿಶ್ವಕಪ್ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹೆಟ್ಮೆಯರ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

ಈ ಸ್ಫೋಟಕ ಅರ್ಧಶತಕದೊಂದಿಗೆ ವೆಸ್ಟ್ ಇಂಡೀಸ್ ಪರ ಟಿ20 ವಿಶ್ವಕಪ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಶಿಮ್ರಾನ್ ಹೆಟ್ಮೆಯರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

2009ರಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕ್ರಿಸ್ ಗೇಲ್ ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಗೇಲ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ವಿಂಡೀಸ್ ದಾಂಡಿಗ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಮುರಿದು ಶಿಮ್ರಾನ್ ಹೆಟ್ಮೆಯರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸ್ಕಾಟ್ಲೆಂಡ್ ವಿರುದ್ಧ ಕೇವಲ 22 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಟಿ20 ವಿಶ್ವಕಪ್ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಕೆರಿಬಿಯನ್ ದಾಂಡಿಗ ಎನಿಸಿಕೊಂಡಿದ್ದಾರೆ.
