AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 17 ಸಿಕ್ಸ್​… ಶಿಮ್ರಾನ್ ಸಿಡಿಲಬ್ಬರ

Zimbabwe vs West Indies: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ತಂಡ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಿಂಡೀಸ್ ಪಡೆ 107 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Feb 24, 2026 | 8:03 AM

Share
T20 World Cup 2026: ಟಿ20 ವಿಶ್ವಕಪ್​ನಲ್ಲಿ ಶಿಮ್ರಾನ್ ಹೆಟ್ಮೆಯರ್ (Shimron Hetmyer) ಸಿಡಿಲಬ್ಬರ ಮುಂದುವರೆದಿದೆ. ಈ ಸಿಡಿಲಬ್ಬರದೊಂದಿಗೆ ಹೆಟ್ಮೆಯರ್ ಈವರೆಗೆ ಸಿಡಿಸಿರುವ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 17. ಅದರಲ್ಲೂ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಶಿಮ್ರಾನ್ ಬ್ಯಾಟ್​ನಿಂದ 7 ಸಿಕ್ಸರ್​ಗಳು ಮೂಡಿಬಂದಿವೆ.

1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಿಮ್ರಾನ್ ಹೆಟ್ಮೆಯರ್ ಕೇವಲ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 85 ರನ್​ ಬಾರಿಸಿದ್ದಾರೆ. ಈ ವೇಳೆ ಬಾರಿಸಿದ ಏಳು ಸಿಕ್ಸರ್​ಗಳೊಂದಿಗೆ ನಿಕೋಲಸ್ ಪೂರನ್ ಅವರ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ.

2 / 5
ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ನಿಕೋಲಸ್ ಪೂರನ್ ಹೆಸರಿನಲ್ಲಿದೆ. 2024 ರ ವಿಶ್ವಕಪ್​ನಲ್ಲಿ ಪೂರನ್ ಬರೋಬ್ಬರಿ 17 ಸಿಕ್ಸರ್​ ಸಿಡಿಸುವ ಮೂಲಕ ಈ ದಾಖಲೆ ನಿರ್ಮಿಸಿದ್ದಾರೆ.

3 / 5
ಇದೀಗ ಸಿಕ್ಸರ್​ಗಳ ಸುರಿಮಳೆಯೊಂದಿಗೆ ಶಿಮ್ರಾನ್ ಹೆಟ್ಮೆಯರ್ ಈ ದಾಖಲೆ ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಐದು ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಹೆಟ್ಮೆಯರ್ ಈವರೆಗೆ ಸಿಡಿಸಿರುವ ಒಟ್ಟು ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 17. ಈ ಮೂಲಕ ಟಿ20 ವಿಶ್ವಕಲ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಪೂರನ್ ದಾಖಲೆಯನ್ನು ಸರಿಗಟ್ಟಿದ್ದಾರೆ.

4 / 5
ಸದ್ಯ ಸೂಪರ್-8 ಪಂದ್ಯವಾಡುತ್ತಿರುವ ಹೆಟ್ಮೆಯರ್ ಮುಂದಿನ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯಗಳಲ್ಲಿ ಒಂದು ಸಿಕ್ಸರ್ ಬಾರಿಸಿದರೂ, ಟಿ20 ವಿಶ್ವಕಪ್ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಬಹುದು. ಹೀಗಾಗಿ ಶಿಮ್ರಾನ್ ಹೆಟ್ಮೆಯರ್ ಬ್ಯಾಟ್​ನಿಂದ ಈ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದಾಗಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ