
ವೆಸ್ಟ್ ಇಂಡೀಸ್‌ನ ದೈತ್ಯ ಬ್ಯಾಟರ್ ಶಿಮ್ರಾನ್ ಹೆಟ್ಮೆಯರ್ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ 100ನೇ ಸಿಪಿಎಲ್ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: CPL)
ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆದ ಟ್ರಿನ್‌ಬಾಗೊ ನೈಟ್ ರೈಡರ್ಸ್ (TKR) ವಿರುದ್ಧದ ಈ ಪಂದ್ಯದಲ್ಲಿ ಅಮೆಝಾನ್ ವಾರಿಯರ್ಸ್ ಪರ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶಿಮ್ರಾನ್ ಹೆಟ್ಲೆಯರ್ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. (PC: CPL)
ಈ ಶತಕದೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ಶಿಮ್ರಾನ್ ಹೆಟ್ಮೆಯರ್ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಆಂಡ್ರೆ ರಸೆಲ್ ಮತ್ತು ಟಿಮ್ ಸೈಫರ್ಟ್ ಅವರ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟುವ ಮೂಲಕ. ರೆಸೆಲ್ (2018) ಹಾಗೂ ಸೈಫರ್ಟ್ (2025) ಈ ಹಿಂದೆ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. (PC: CPL)
ಇದೀಗ 100ನೇ ಪಂದ್ಯದಲ್ಲಿ ವಿಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಶಿಮ್ರಾನ್ ಹೆಟ್ಮೆಯರ್ ಕೆರಿಬಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಸ್ಮರಣೀಯ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಇದು ಹಟ್ಮೆಯರ್ ಅವರ 2ನೇ ಸಿಪಿಎಲ್ ಶತಕ. (PC: CPL)
ಇದಕ್ಕೂ ಮುನ್ನ 2018ರಲ್ಲಿ ಜಮೈಕಾ ತಲ್ಲಾವಾಸ್ ತಂಡದ ವಿರುದ್ಧ ಕೇವಲ 49 ಎಸೆತಗಳಲ್ಲಿ 100 ರನ್ ಚಚ್ಚಿದ್ದ ಶಿಮ್ರಾನ್ ಹೆಟ್ಮೆಯರ್, ಕೆರಿಬಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಟ್ರಿನ್‌ಬಾಗೊ ವಿರುದ್ಧ ಮತ್ತೊಂದು ಭರ್ಜರಿ ಸೆಂಚುರಿ ಸಿಡಿಸುವ ಮೂಲಕ, ಸಿಪಿಎಲ್ ಟೂರ್ನಿಯಲ್ಲಿ ಒಂದಕ್ಕಿಂತ ಹೆಚ್ಚು ಶತತಗಳಿಸಿದ ಬ್ಯಾಟರ್ಗಳ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. (PC: CPL)