AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivam Dube: ದುಬೆ ದರ್ಬಾರ್​ಗೆ ಹಾರ್ದಿಕ್ ಪಾಂಡ್ಯ ಸ್ಥಾನ ಶೇಕಿಂಗ್..!

Shivam Dube: ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 40 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 60 ರನ್​ ಬಾರಿಸಿದ್ದ ಶಿವಂ ದುಬೆ, 2ನೇ ಟಿ20 ಪಂದ್ಯದಲ್ಲಿ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 63 ರನ್ ಚಚ್ಚಿದ್ದಾರೆ.

TV9 Web
| Edited By: |

Updated on: Jan 15, 2024 | 10:09 AM

Share
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಅಬ್ಬರ ಮುಂದುವರೆದಿದೆ. ಮೊದಲೆರಡು ಪಂದ್ಯಗಳಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ದುಬೆ ಬ್ಯಾಕ್ ಟು ಬ್ಯಾಕ್ ಸ್ಪೋಟಕ ಅರ್ಧಶತಕಗಳನ್ನು ಬಾರಿಸಿದ್ದಾರೆ.

1 / 8
ಇತ್ತ ಅಫ್ಘಾನಿಸ್ತಾನ್ ವಿರುದ್ಧ ದುಬೆ ದರ್ಬಾರ್ ನಡೆಯುತ್ತಿದ್ದರೆ ಅತ್ತ ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ಶೇಕಿಂಗ್ ಆಗುತ್ತಿದೆ. ಅಂದರೆ ಗಾಯಾಳು ಹಾರ್ದಿಕ್ ಪಾಂಡ್ಯ ಬದಲಿಗೆ ಈ ಸರಣಿಯಲ್ಲಿ ಶಿವಂ ದುಬೆ ಸ್ಥಾನ ಪಡೆದಿದ್ದಾರೆ. ಇದೀಗ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಶಿವಂ ದುಬೆ ಯಶಸ್ವಿಯಾಗಿದ್ದಾರೆ.

2 / 8
ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 40 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 60 ರನ್​ ಬಾರಿಸಿದ್ದ ಶಿವಂ ದುಬೆ, 2ನೇ ಟಿ20 ಪಂದ್ಯದಲ್ಲಿ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 63 ರನ್ ಚಚ್ಚಿದ್ದಾರೆ. ಇದಲ್ಲದೆ ಎರಡು ಪಂದ್ಯಗಳಿಂದ 2 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ.

3 / 8
ಅಂದರೆ ಇಲ್ಲಿ ಶಿವಂ ದುಬೆ ತನ್ನ ಆಲ್​ರೌಂಡರ್ ಆಟದೊಂದಿಗೆ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

4 / 8
ಒಂದು ವೇಳೆ ಹಾರ್ದಿಕ್ ಪಾಂಡ್ಯ ಐಪಿಎಲ್​ನಲ್ಲಿ ವಿಫಲರಾದರೆ ಶಿವಂ ದುಬೆಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಸಿಗುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ ಪಾಂಡ್ಯ ಫಿಟ್​ನೆಸ್ ಸಮಸ್ಯೆಯ ಕಾರಣ ಅರ್ಧದಲ್ಲೇ ಟೂರ್ನಿ ತೊರೆದಿದ್ದರು.

5 / 8
ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ. ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ತಮ್ಮ ಬ್ಯಾಟಿಂಗ್ ಫಾರ್ಮ್ ಪ್ರದರ್ಶಿಸುವುದರ ಜೊತೆಗೆ 4 ಓವರ್​ಗಳನ್ನು ಬೌಲಿಂಗ್ ಮಾಡಬಲ್ಲ ಸಾಮರ್ಥ್ಯವನ್ನು ನಿರೂಪಿಸಬೇಕಿದೆ.

6 / 8
ಹಾಗಾಗಿ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್​ ಪ್ರದರ್ಶನದ ಮೇಲೆ ನಿಂತಿದೆ ಎಂದರೆ ತಪ್ಪಾಗಲಾರದು. ಒಂದು ವೇಳೆ ಶಿವಂ ದುಬೆ ಐಪಿಎಲ್​ನಲ್ಲೂ ಅದ್ಭುತ ಪ್ರದರ್ಶನ ನೀಡಿದರೆ, ಹಾರ್ದಿಕ್ ಪಾಂಡ್ಯ ಹಿಂದಿಕ್ಕಿ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

7 / 8
ಒಟ್ಟಿನಲ್ಲಿ ಶಿವಂ ದುಬೆ ದರ್ಬಾರ್​ನೊಂದಿಗೆ ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಪಾಲಿಗೆ ಖಾಯಂ ಆಗಿದ್ದ ಆಲ್​ರೌಂಡರ್ ಸ್ಥಾನ ಅಲುಗಾಡಲಾರಂಭಿಸಿದೆ. ಹೀಗಾಗಿಯೇ ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ​ಇಬ್ಬರಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲ ಹುಟ್ಟಿಕೊಂಡಿದೆ.

8 / 8
TV9 Web
TV9 Web

TV9 Kannada

Read More
Follow Us
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?