Shivam Dube: ದುಬೆ ದರ್ಬಾರ್ಗೆ ಹಾರ್ದಿಕ್ ಪಾಂಡ್ಯ ಸ್ಥಾನ ಶೇಕಿಂಗ್..!
TV9 Web | Updated By: ಝಾಹಿರ್ ಯೂಸುಫ್
Updated on:
Jan 15, 2024 | 10:09 AM
Shivam Dube: ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 40 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 60 ರನ್ ಬಾರಿಸಿದ್ದ ಶಿವಂ ದುಬೆ, 2ನೇ ಟಿ20 ಪಂದ್ಯದಲ್ಲಿ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 63 ರನ್ ಚಚ್ಚಿದ್ದಾರೆ.
1 / 8
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಅಬ್ಬರ ಮುಂದುವರೆದಿದೆ. ಮೊದಲೆರಡು ಪಂದ್ಯಗಳಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವ ದುಬೆ ಬ್ಯಾಕ್ ಟು ಬ್ಯಾಕ್ ಸ್ಪೋಟಕ ಅರ್ಧಶತಕಗಳನ್ನು ಬಾರಿಸಿದ್ದಾರೆ.
2 / 8
ಇತ್ತ ಅಫ್ಘಾನಿಸ್ತಾನ್ ವಿರುದ್ಧ ದುಬೆ ದರ್ಬಾರ್ ನಡೆಯುತ್ತಿದ್ದರೆ ಅತ್ತ ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನ ಶೇಕಿಂಗ್ ಆಗುತ್ತಿದೆ. ಅಂದರೆ ಗಾಯಾಳು ಹಾರ್ದಿಕ್ ಪಾಂಡ್ಯ ಬದಲಿಗೆ ಈ ಸರಣಿಯಲ್ಲಿ ಶಿವಂ ದುಬೆ ಸ್ಥಾನ ಪಡೆದಿದ್ದಾರೆ. ಇದೀಗ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಶಿವಂ ದುಬೆ ಯಶಸ್ವಿಯಾಗಿದ್ದಾರೆ.
3 / 8
ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 40 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 60 ರನ್ ಬಾರಿಸಿದ್ದ ಶಿವಂ ದುಬೆ, 2ನೇ ಟಿ20 ಪಂದ್ಯದಲ್ಲಿ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 63 ರನ್ ಚಚ್ಚಿದ್ದಾರೆ. ಇದಲ್ಲದೆ ಎರಡು ಪಂದ್ಯಗಳಿಂದ 2 ವಿಕೆಟ್ ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ.
4 / 8
ಅಂದರೆ ಇಲ್ಲಿ ಶಿವಂ ದುಬೆ ತನ್ನ ಆಲ್ರೌಂಡರ್ ಆಟದೊಂದಿಗೆ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
5 / 8
ಒಂದು ವೇಳೆ ಹಾರ್ದಿಕ್ ಪಾಂಡ್ಯ ಐಪಿಎಲ್ನಲ್ಲಿ ವಿಫಲರಾದರೆ ಶಿವಂ ದುಬೆಗೆ ಟಿ20 ವಿಶ್ವಕಪ್ನಲ್ಲಿ ಸ್ಥಾನ ಸಿಗುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಕಳೆದ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿದಿದ್ದ ಪಾಂಡ್ಯ ಫಿಟ್ನೆಸ್ ಸಮಸ್ಯೆಯ ಕಾರಣ ಅರ್ಧದಲ್ಲೇ ಟೂರ್ನಿ ತೊರೆದಿದ್ದರು.
6 / 8
ಹೀಗಾಗಿ ಟಿ20 ವಿಶ್ವಕಪ್ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ. ಅಷ್ಟೇ ಅಲ್ಲದೆ ಐಪಿಎಲ್ನಲ್ಲಿ ತಮ್ಮ ಬ್ಯಾಟಿಂಗ್ ಫಾರ್ಮ್ ಪ್ರದರ್ಶಿಸುವುದರ ಜೊತೆಗೆ 4 ಓವರ್ಗಳನ್ನು ಬೌಲಿಂಗ್ ಮಾಡಬಲ್ಲ ಸಾಮರ್ಥ್ಯವನ್ನು ನಿರೂಪಿಸಬೇಕಿದೆ.
7 / 8
ಹಾಗಾಗಿ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಭವಿಷ್ಯ ಐಪಿಎಲ್ ಪ್ರದರ್ಶನದ ಮೇಲೆ ನಿಂತಿದೆ ಎಂದರೆ ತಪ್ಪಾಗಲಾರದು. ಒಂದು ವೇಳೆ ಶಿವಂ ದುಬೆ ಐಪಿಎಲ್ನಲ್ಲೂ ಅದ್ಭುತ ಪ್ರದರ್ಶನ ನೀಡಿದರೆ, ಹಾರ್ದಿಕ್ ಪಾಂಡ್ಯ ಹಿಂದಿಕ್ಕಿ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.
8 / 8
ಒಟ್ಟಿನಲ್ಲಿ ಶಿವಂ ದುಬೆ ದರ್ಬಾರ್ನೊಂದಿಗೆ ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಪಾಲಿಗೆ ಖಾಯಂ ಆಗಿದ್ದ ಆಲ್ರೌಂಡರ್ ಸ್ಥಾನ ಅಲುಗಾಡಲಾರಂಭಿಸಿದೆ. ಹೀಗಾಗಿಯೇ ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಇಬ್ಬರಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂಬ ಕುತೂಹಲ ಹುಟ್ಟಿಕೊಂಡಿದೆ.