Shivam Dube: ವಿರಾಟ್ ಕೊಹ್ಲಿಯ ಅಪರೂಪದ ದಾಖಲೆಯನ್ನು ಸರಿಗಟ್ಟಿದ ಶಿವಂ ದುಬೆ
TV9 Web | Updated By: ಝಾಹಿರ್ ಯೂಸುಫ್
Updated on:
Jan 15, 2024 | 2:42 PM
Shivam Dube - Virat Kohli: ಈ ಪಂದ್ಯದಲ್ಲಿ 3 ಓವರ್ಗಳನ್ನು ಬೌಲಿಂಗ್ ಮಾಡಿದ್ದ ಶಿವಂ ದುಬೆ 36 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಅಲ್ಲದೆ ಬ್ಯಾಟಿಂಗ್ನಲ್ಲಿ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 63 ರನ್ ಬಾರಿಸಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 1 ವಿಕೆಟ್ ಪಡೆದು ಅರ್ಧಶತಕ ಬಾರಿಸಿದ ವಿಶೇಷ ದಾಖಲೆ ಪಟ್ಟಿಗೆ ದುಬೆ ಸೇರ್ಪಡೆಯಾದರು.
1 / 6
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಬಾರಿಸಿ ಮಿಂಚಿದ್ದ ಶಿವಂ ದುಬೆ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
2 / 6
ಈ ಪಂದ್ಯದಲ್ಲಿ 3 ಓವರ್ಗಳನ್ನು ಬೌಲಿಂಗ್ ಮಾಡಿದ್ದ ಶಿವಂ ದುಬೆ 36 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಅಲ್ಲದೆ ಬ್ಯಾಟಿಂಗ್ನಲ್ಲಿ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 63 ರನ್ ಬಾರಿಸಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 1 ವಿಕೆಟ್ ಪಡೆದು ಅರ್ಧಶತಕ ಬಾರಿಸಿದ ವಿಶೇಷ ದಾಖಲೆ ಪಟ್ಟಿಗೆ ದುಬೆ ಸೇರ್ಪಡೆಯಾದರು.
3 / 6
ಅಲ್ಲದೆ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದರು. ಕಿಂಗ್ ಕೊಹ್ಲಿ 2012 ರಲ್ಲಿ ಪಾಕಿಸ್ತಾನ್ ವಿರುದ್ಧ 1 ವಿಕೆಟ್ ಕಬಳಿಸಿ, ಅರ್ಧಶತಕ ಬಾರಿಸಿ ಮಿಂಚಿದ್ದರು. ಹಾಗೆಯೇ 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕದ ಜೊತೆಗೆ 1 ವಿಕೆಟ್ ಕಬಳಿಸುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದರು.
4 / 6
ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ 2 ಬಾರಿ 1 ವಿಕೆಟ್ ಪಡೆದು, ಅರ್ಧಶತಕ ಬಾರಿಸಿದ ವಿಶೇಷ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದರು. ಇದೀಗ ಈ ದಾಖಲೆಯನ್ನು ಶಿವಂ ದುಬೆ ಸರಿಗಟ್ಟಿದ್ದಾರೆ.
5 / 6
ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 1 ವಿಕೆಟ್ ಪಡೆದು ಶಿವಂ ದುಬೆ ಅಜೇಯ ಅರ್ಧಶತಕ ಬಾರಿಸಿದ್ದರು. ಇದೀಗ ದ್ವಿತೀಯ ಪಂದ್ಯದಲ್ಲೂ 1 ವಿಕೆಟ್ ಜೊತೆಗೆ ಹಾಫ್ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ 2 ಬಾರಿ 1 ವಿಕೆಟ್ + ಅರ್ಧಶತಕಗಳ ಸಾಧನೆ ಮಾಡಿದ ಕಿಂಗ್ ಕೊಹ್ಲಿಯ ದಾಖಲೆಯನ್ನು ದುಬೆ ಸರಿಗಟ್ಟಿದ್ದಾರೆ.
6 / 6
ಇನ್ನು ಈ ವಿಶೇಷ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುವರಾಜ್ ಸಿಂಗ್. 2009 ರಲ್ಲಿ ನ್ಯೂಝಿಲೆಂಡ್ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯಗಳಲ್ಲಿ ಯುವಿ 1 ವಿಕೆಟ್ ಕಬಳಿಸಿ ಅರ್ಧಶತಕವನ್ನು ಬಾರಿಸಿ ಮಿಂಚಿದ್ದರು. ಹಾಗೆಯೇ 2012 ರಲ್ಲಿ ಪಾಕಿಸ್ತಾನ್ ವಿರುದ್ಧ ಕೂಡ ಈ ಸಾಧನೆಯನ್ನು ಪುನರಾವರ್ತಿಸಿದ್ದರು. ಈ ಮೂಲಕ ಒಟ್ಟು 3 ಬಾರಿ 1 ವಿಕೆಟ್ + ಅರ್ಧಶತಕ ಬಾರಿಸಿ ಯುವರಾಜ್ ಸಿಂಗ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.