India vs England 2nd Test: ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ತನ್ನ ಪ್ಲೇಯಿಂಗ್ ಇಲೆವೆನ್ನ್ನು ಘೋಷಿಸಿದೆ. ಈ ಆಡುವ ಬಳಗದಲ್ಲಿ 20 ವರ್ಷದ ಶೊಯೆಬ್ ಬಶೀರ್ (Shoaib Bashir) ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ ಇದು ಶೊಯೆಬ್ಗೆ ಚೊಚ್ಚಲ ಟೆಸ್ಟ್ ಪಂದ್ಯ.
ಅದರಂತೆ ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಮೈದಾನದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ಶೊಯೆಬ್ ಬಶೀರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಲಿದ್ದಾರೆ.
ಬಲಗೈ ಆಫ್ ಬ್ರೇಕ್ ಸ್ಪಿನ್ನರ್ ಆಗಿರುವ ಶೊಯೆಬ್ ಬಶೀರ್ ಇದುವರೆಗೆ ಕೇವಲ 6 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 10 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಬಶೀರ್ ಪಡೆದಿರುವುದು ಕೇವಲ 10 ವಿಕೆಟ್ಗಳು ಮಾತ್ರ.
ಇನ್ನು ಲೀಸ್ಟ್ ಎ ಕ್ರಿಕೆಟ್ನಲ್ಲಿ 7 ಪಂದ್ಯಗಳನ್ನಾಡಿರುವ ಶೊಯೆಬ್ ಬಶೀರ್ 3 ವಿಕೆಟ್ಗಳನ್ನು ಕಬಳಿಸಲಷ್ಟೇ ಯಶಸ್ವಿಯಾಗಿದ್ದಾರೆ. ಹಾಗೆಯೇ 5 ಟಿ20 ಪಂದ್ಯಗಳಿಂದ ಕೇವಲ 4 ವಿಕೆಟ್ ಮಾತ್ರ ಪಡೆದಿದ್ದಾರೆ. ಅಂದರೆ ಶೊಯೆಬ್ ಬಶೀರ್ ಅವರ ಖಾತೆಯಲ್ಲಿರುವ ಒಟ್ಟು ವಿಕೆಟ್ಗಳ ಸಂಖ್ಯೆ ಕೇವಲ 17.
ಇದಾಗ್ಯೂ ಭಾರತದಂತಹ ಬಲಿಷ್ಠ ತಂಡದ ವಿರುದ್ಧ ಶೊಯೆಬ್ಗೆ ಅವಕಾಶ ಸಿಗಲು ಮುಖ್ಯ ಕಾರಣ ಜ್ಯಾಕ್ ಲೀಚ್. ಇಂಗ್ಲೆಂಡ್ ತಂಡದ ಅನುಭವಿ ಸ್ಪಿನ್ನರ್ ಲೀಚ್ ಮೊಣಕಾಲಿನ ಗಾಯದ ಕಾರಣ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇತ್ತ ವಿಶಾಖಪಟ್ಟಣಂ ಮೈದಾವು ಸ್ಪಿನ್ ಬೌಲರ್ಗಳಿಗೆ ಸಹಕಾರಿ. ಹೀಗಾಗಿ ತಂಡದಲ್ಲಿರುವ ಏಕೈಕ ಸ್ಪಿನ್ನರ್ ಶೊಯೆಬ್ ಬಶೀರ್ ಅವರನ್ನು ಕಣಕ್ಕಿಳಿಸಲು ಇಂಗ್ಲೆಂಡ್ ನಿರ್ಧರಿಸಿದೆ.
ಅದರಂತೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ಮೂಲಕ ವೃತ್ತಿಜೀವನ ಆರಂಭಿಸಲು ಸಜ್ಜಾಗಿರುವ ಶೊಯೆಬ್ ಬಶೀರ್ ತನ್ನ ಚೊಚ್ಚಲ ಪಂದ್ಯದಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ದ್ವಿತೀಯ ಟೆಸ್ಟ್ಗೆ ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್.
Published On - 3:14 pm, Thu, 1 February 24