ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್
Shreyanka Patil Records: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಶ್ರೇಯಾಂಕಾ ಪಾಟೀಲ್ ಈವರೆಗೆ 18 ಪಂದ್ಯಗಳನ್ನಾಡಿದ್ದಾರೆ. ಈ ಹದಿನೆಂಟು ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದಿರುವ ಶ್ರೇಯಾಂಕಾ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಮೂರು ಬಾರಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.
Updated on: Jan 17, 2026 | 12:03 PM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್ ಕಬಳಿಸುವ ಮೂಲಕ. ಈ ಐದು ವಿಕೆಟ್ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ನವಿ ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ WPL ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.

ಅಷ್ಟೇ ಅಲ್ಲದೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ WPL ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.

2024ರ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ WPL ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು.

ಇದೀಗ ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಉರುಳಿಸುವ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ಅಥವಾ 4+ ವಿಕೆಟ್ ಪಡೆದ ಏಕೈಕ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ WPL ನಲ್ಲಿ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




