AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್

Shreyanka Patil Records: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಶ್ರೇಯಾಂಕಾ ಪಾಟೀಲ್ ಈವರೆಗೆ 18 ಪಂದ್ಯಗಳನ್ನಾಡಿದ್ದಾರೆ. ಈ ಹದಿನೆಂಟು ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದಿರುವ ಶ್ರೇಯಾಂಕಾ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಮೂರು ಬಾರಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 17, 2026 | 12:03 PM

Share
WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ನವಿ ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್​ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ WPL ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.

2 / 5
ಅಷ್ಟೇ ಅಲ್ಲದೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ WPL ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.

3 / 5
2024ರ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ WPL ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು.

4 / 5
ಇದೀಗ ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಉರುಳಿಸುವ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಮೂರು ಬಾರಿ 4 ಅಥವಾ 4+ ವಿಕೆಟ್ ಪಡೆದ ಏಕೈಕ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ WPL ನಲ್ಲಿ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow Us
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು

ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು

ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್

‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು

ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ

ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ

ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ

ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ

ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ