AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyanka Patil: ಪಾಕ್ ವಿರುದ್ಧದ ಪಂದ್ಯದಲ್ಲಿ ಟಗರು ಪುಟ್ಟಿ ಮಿಂಚಿಂಗ್

Womens T20 World Cup 2024: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಕರುನಾಡ ಕುವರಿ, ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕ ಪಾಟೀಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 07, 2024 | 7:20 AM

Share
ಮಹಿಳಾ ಟಿ20 ವಿಶ್ವಕಪ್‌ನ 7ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಅದು ಸಹ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಎಂಬುದು ವಿಶೇಷ. ಭಾರತದ ಈ ಭರ್ಜರಿ ಗೆಲುವಿನ ರೂವಾರಿಗಳಲ್ಲಿ ಕನ್ನಡತಿ ಶ್ರೇಯಾಂಕ ಪಾಟೀಲ್ ಕೂಡ ಒಬ್ಬರು.

1 / 5
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಪಾಕಿಸ್ತಾನ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಮೊದಲ ಓವರ್‌ನಲ್ಲೇ ಗುಲ್ ಫಿರೋಝ (0) ರನ್ನು ಬೌಲ್ಡ್ ಮಾಡಿ ರೇಣುಕಾ ಸಿಂಗ್ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಸಿದ್ರ ಅಮಿನ್ (8) ಸಹ ಔಟಾದರು.

2 / 5
ಅದಾಗ್ಯೂ ಆರಂಭಿಕ ಆಟಗಾರ್ತಿ ಮುಬಿನಾ ಅಲಿ ಉತ್ತಮ ಬ್ಯಾಟಿಂಗ್ ಮುಂದುವರೆಸಿದ್ದರು. ಈ ಹಂತದಲ್ಲಿ ದಾಳಿಗಿಳಿದ ಸ್ಪಿನ್ನರ್ ಶ್ರೇಯಾಂಕ ಪಾಟೀಲ್ ಮುಬಿನಾ (17) ಅವರನ್ನು ಸ್ಟಂಪ್ ಔಟ್ ಮಾಡುವಲ್ಲಿ ಯಶಸ್ವಿಯಾದರು. ಇದಾದ ಬಳಿಕ ತುಬಾ ಹಸನ್​ಗೂ (0) ಕನ್ನಡತಿ ಪೆವಿಲಿಯನ್ ಹಾದಿ ತೋರಿಸಿದರು.

3 / 5
ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿ 4 ಓವರ್‌ಗಳಲ್ಲಿ 19 ರನ್ ನೀಡಿ 3 ವಿಕೆಟ್ ಕಬಳಿಸಿದ ಅರುಂಧತಿ ರೆಡ್ಡಿಗೆ ಉತ್ತಮ ಸಾಥ್ ನೀಡಿದ ಶ್ರೇಯಾಂಕ ಪಾಟೀಲ್ 4 ಓವರ್‌ಗಳಲ್ಲಿ ನೀಡಿದ್ದು ಕೇವಲ 12 ರನ್ ಗಳು ಮಾತ್ರ. ಅಲ್ಲದೆ 2 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ಈ ಮೂಲಕ ಪಾಕಿಸ್ತಾನ್ ತಂಡವನ್ನು 20 ಓವರ್‌ಗಳಲ್ಲಿ 105 ರನ್ ಗಳಿಗೆ ನಿಯಂತ್ರಿಸುವಲ್ಲಿ ಶ್ರೇಯಾಂಕ ಪಾಟೀಲ್ ಪ್ರಮುಖ ಪಾತ್ರವಹಿಸಿದರು.

4 / 5
ಇನ್ನು 106 ರನ್ ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಶಫಾಲಿ ವರ್ಮಾ (32), ಜೆಮಿಮಾ ರೊಡ್ರಿಗಸ್ (23) ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ (29) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 18.5 ಓವರ್‌ಗಳಲ್ಲಿ  108 ರನ್ ಗಳಿಸಿ ಟೀಮ್ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು

ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ

ಕ್ಲಿಯರ್ ಔಟ್ ಆಗಿದ್ದರೂ... ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!

ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ ಜಪ್ತಿ

‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ

ಕೆಸಿಇಟಿ ಫಲಿತಾಂಶ ಪ್ರಕಟ: ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ

2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದತ್ತ 'ಲಾರ್ಡ್ಸ್'​ ಟೆಸ್ಟ್

ಬರ್ತ್ ಡೇ ಪಾರ್ಟಿ ವೇಳೆ ಕುಸಿದು ಬಿದ್ದ ಕಟ್ಟಡ: 15 ಯುವಕರು ಜಸ್ಟ್ ಮಿಸ್