ಸದ್ಯಕ್ಕೆ ಹೊರಬಿದ್ದಿರುವ ಮಾಹಿತಿ ಪ್ರಕಾರ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದರೆ, ಕೆಎಲ್ ರಾಹುಲ್ ಬಗ್ಗೆ ಯಾವುದೇ ಸ್ಪಷ್ಟತೆ ಸಿಗುತ್ತಿಲ್ಲ. ಮಾಹಿತಿ ಪ್ರಕಾರ, ಶ್ರೇಯಸ್ ಏಷ್ಯಾಕಪ್ ಆಡುವ ಸಾಧ್ಯತೆಗಳಿವೆ. ಆದರೆ ಕೆಎಲ್ ರಾಹುಲ್ ಏಷ್ಯಾಕಪ್‌ಗೆ ಫಿಟ್ ಆಗುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ.