Shreyas Iyer With Dhanashree Verma: ಧನಶ್ರೀ ವರ್ಮಾ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡ ಶ್ರೇಯಸ್ ಅಯ್ಯರ್: ಚಹಾಲ್ ಎಲ್ಲಿ ಪ್ರಶ್ನಿಸಿದ ಎಂದು ನೆಟ್ಟಿಗರು..!

Shreyas Iyer With Dhanashree Verma: ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಶಾರ್ದೂಲ್ ಠಾಕೂರ್ ಅವರ ವಿವಾಹ ಕಾರ್ಯಕ್ರಮದಲ್ಲೂ ಅಯ್ಯರ್ ಚಹಾಲ್ ಪತ್ನಿ ಜೊತೆ ಪೋಸ್ ನೀಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on:Apr 09, 2023 | 4:05 PM

ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಬೆನ್ನು ನೋವಿನ  ಕಾರಣ ಐಪಿಎಲ್ ಸೀಸನ್ 16 ರಿಂದ ಹಿಂದೆ ಸರಿದಿದ್ದಾರೆ. ಅಷ್ಟೇ ಅಲ್ಲದೆ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಕಾರಣ ಅವರು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅಯ್ಯರ್ ಇನ್ನೂ ಕೂಡ ಚಿಕಿತ್ಸೆಗೆ ಒಳಗಾಗಿಲ್ಲ ಎಂಬುದಕ್ಕೆ ಫೋಟೋವೊಂದು ಸಾಕ್ಷಿಯಾಗಿದೆ.

1 / 8
ಈ ಫೋಟೋವನ್ನು ಹಂಚಿಕೊಂಡಿದ್ದು ಮತ್ಯಾರೂ ಅಲ್ಲ. ಟೀಮ್ ಇಂಡಿಯಾ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ. ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ರಂಜಾನ್ ಇಫ್ತಾರ್ ಪಾರ್ಟಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ತೆಗೆದ ಫೋಟೋವೊಂದನ್ನು ಧನಶ್ರೀ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 8
ಆದರೆ ಈ ಗ್ರೂಪ್​ ಫೋಟೋದ ಹಿನ್ನಲೆಯಲ್ಲಿ ಶ್ರೇಯಸ್ ಅಯ್ಯರ್ ಇರುವುದನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಇದೀಗ ಧನಶ್ರೀ ವರ್ಮಾ ಅವರ ಸೆಲ್ಫಿ ಕ್ಲಿಕ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 8
ಈ ಫೋಟೋ ವೈರಲ್ ಆದ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿರುವ ಮತ್ತೊಂದಷ್ಟು ಫೋಟೋಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ. ಇತ್ತ ಪತ್ನಿಯ ಜೊತೆಗಿರುವ ಅಯ್ಯರ್ ಫೋಟೋವನ್ನು ಚಹಾಲ್​ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಟ್ಯಾಗ್ ಮಾಡುವ ಮೂಲಕ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ.

4 / 8
ಅಂದಹಾಗೆ ಶ್ರೇಯಸ್ ಅಯ್ಯರ್ ಹಾಗೂ ಧನಶ್ರೀ ವರ್ಮಾ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ ಶಾರ್ದೂಲ್ ಠಾಕೂರ್ ಅವರ ವಿವಾಹ ಕಾರ್ಯಕ್ರಮದಲ್ಲೂ ಅಯ್ಯರ್ ಚಹಾಲ್ ಪತ್ನಿ ಜೊತೆ ಪೋಸ್ ನೀಡಿದ್ದರು. ಈ ಫೋಟೋವನ್ನು ಧನಶ್ರೀ ವರ್ಮಾ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದರು.

5 / 8
ಹಾಗೆಯೇ ಸೂರ್ಯಕುಮಾರ್ ಯಾದವ್ ದಂಪತಿ ಜೊತೆ ನೈಟ್ ಔಟ್​ನಲ್ಲೂ ಶ್ರೇಯಸ್ ಅಯ್ಯರ್  ಹಾಗೂ ಧನಶ್ರೀ ವರ್ಮಾ ಜೊತೆಯಾಗಿದ್ದರು. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಯುಜ್ವೇಂದ್ರ ಚಹಾಲ್ ಎಲ್ಲಿ ಎಂಬ ಪ್ರಶ್ನೆಗಳ ಸುರಿಮಳೆಗೈದಿದ್ದರು.

6 / 8
ಏಕೆಂದರೆ ಇದಕ್ಕೂ ಮುನ್ನ ಯುಜ್ವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಇತ್ತೀಚೆಗೆ ನಡೆದ ಸನ್​ರೈಸರ್ಸ್ ಹೈದರಾಬಾದ್-ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದ ವೇಳೆ ಧನಶ್ರೀ ವರ್ಮಾ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಯುಜ್ವೇಂದ್ರ ಚಹಾಲ್ ವಿಕೆಟ್ ಪಡೆಯುತ್ತಿದ್ದಂತೆ ಸಂಭ್ರಮಿಸುತ್ತಿರುವ ಫೋಟೋಗಳು ಕೂಡ ವೈರಲ್ ಆಗಿತ್ತು. ಇದರೊಂದಿಗೆ ಚಹಾಲ್-ಧನಶ್ರೀ ನಡುವಣ ಎಲ್ಲಾ ವದಂತಿಗಳಿಗೆ ತೆರೆ ಬಿದ್ದಿತ್ತು.

7 / 8
ಇದೀಗ ಶ್ರೇಯಸ್ ಅಯ್ಯರ್ ಜೊತೆ ಇಫ್ತಾರ್ ಪಾರ್ಟಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಧನಶ್ರೀ ವರ್ಮಾ ಮತ್ತೊಮ್ಮೆ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಅಲ್ಲದೆ ಇಬ್ಬರ ನಡುವಣ ಗೆಳೆತನದ ಬಗ್ಗೆ ನಾನಾ ರೀತಿಯಲ್ಲಿ ಯುಜ್ವೇಂದ್ರ ಚಹಾಲ್ ಅವರನ್ನು ಟ್ರೋಲ್ ಮಾಡಲಾಗುತ್ತಿರುವುದೇ ಇಲ್ಲಿ ಅಚ್ಚರಿ.

8 / 8

Published On - 3:58 pm, Sun, 9 April 23

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ