Shreyas Iyer: ಶ್ರೇಯಸ್ ಅಯ್ಯರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

Updated on: Nov 01, 2025 | 1:37 PM

Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವೈದ್ಯರ ಮೇಲ್ವಿಚಾರಣೆಯಲ್ಲಿರುವ ಅಯ್ಯರ್ ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ.

1 / 5
ಭಾರತ ಏಕದಿನ ತಂಡದ ಉಪ  ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಸಿಡ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅಯ್ಯರ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

2 / 5
ಇದಾಗ್ಯೂ ಶ್ರೇಯಸ್ ಅಯ್ಯರ್ ಭಾರತಕ್ಕೆ ಮರಳಲು ಕೆಲ ದಿನಗಳನ್ನು ತೆಗೆದುಕೊಳ್ಳಲಿದ್ದಾರೆ. ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಅಯ್ಯರ್ ಅವರ ಆರೋಗ್ಯವು ಸ್ಥಿರವಾಗಿದ್ದು, ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ.  ಅವರು ಮುಂದಿನ ವೈದ್ಯಕೀಯ ಸಮಾಲೋಚನೆಗಾಗಿ ಸಿಡ್ನಿಯಲ್ಲಿಯೇ ಇರಲಿದ್ದಾರೆ. ಆ ಬಳಿಕ ಅವರು ಪ್ರಯಾಣಿಸಲು ಯೋಗ್ಯರೆಂದು ಪರಿಗಣಿಸಲ್ಪಟ್ಟ ನಂತರ ಭಾರತಕ್ಕೆ ಹಿಂತಿರುಗಲಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್​ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.

4 / 5
ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿತ್ತು. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್‌ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

5 / 5
ಇದೀಗ ಚೇತರಿಸಿಕೊಂಡಿರುವ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಇದಾಗ್ಯೂ ವೈದ್ಯಕೀಯ ಮೇಲ್ವಿಚಾರಣೆಗಾಗಿ ಅವರು ಕೆಲ ದಿನಗಳ ಕಾಲ ಸಿಡ್ನಿಯಲ್ಲೇ ಉಳಿಯಲಿದ್ದಾರೆ. ಆ ಬಳಿಕವಷ್ಟೇ ಶ್ರೇಯಸ್ ಅಯ್ಯರ್ ಮುಂಬೈಗೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Published On - 12:23 pm, Sat, 1 November 25