AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕನಾಗಿ ಮೊದಲ ಗೆಲುವ ಹುಡುಕಾಟದಲ್ಲಿ ಶ್ರೇಯಸ್ ಅಯ್ಯರ್

ಭಾರತ-ಅಫ್ಘಾನಿಸ್ತಾನ ಟಿ20 ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ. ತಾಯ್ನಾಡಿನಲ್ಲಿ ಇದು ಅವರ ಮೊದಲ ನಾಯಕತ್ವದ ಟಿ20 ಪಂದ್ಯವಾಗಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಅಯ್ಯರ್ ತಮ್ಮ ನಾಯಕತ್ವದ ಪ್ರಯಾಣದಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದ್ದಾರೆ.

ಪೃಥ್ವಿಶಂಕರ
|

Updated on: Sep 12, 2026 | 4:45 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ ಆರಂಭವಾಗಲಿದೆ. ಈ ಸರಣಿಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸುತ್ತಿದೆ. ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಬೇಕೆಂದಿರುವ ಶ್ರೇಯಸ್ ಅಯ್ಯರ್​ಗೆ ಈ ಪಂದ್ಯ ಮತ್ತಷ್ಟು ವಿಶೇಷವೂ ಆಗಿದೆ(PC-BCCI).

1 / 5
ವಾಸ್ತವವಾಗಿ 2026ರ ಟಿ20 ವಿಶ್ವಕಪ್ ನಂತರ ಶ್ರೇಯಸ್ ಅಯ್ಯರ್ ಟಿ20 ತಂಡಕ್ಕೆ ಆಯ್ಕೆಯಾಗಿದ್ದಲ್ಲದೆ ನಾಯಕತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಆದಾಗ್ಯೂ ಅಯ್ಯರ್​ಗೆ ನಾಯಕನಾಗಿ ಉತ್ತಮ ಆರಂಭ ಸಿಗಲಿಲ್ಲ. ಅಯ್ಯರ್ ನಾಯಕತ್ವದ ಮೊದಲ ಸರಣಿಯಲ್ಲಿ ಭಾರತವು ಐರ್ಲೆಂಡ್ ವಿರುದ್ಧ ಸೋತಿತ್ತು. ನಂತರ ಇಂಗ್ಲೆಂಡ್ ವಿರುದ್ಧವೂ ಸೋತಿತ್ತು(PC-BCCI).

2 / 5
ಆದರೆ ಜಿಂಬಾಬ್ವೆ ಪ್ರವಾಸದಲ್ಲಿ ಟಿ20 ಸರಣಿ  ಗೆಲ್ಲುವಲ್ಲಿ ಶ್ರೇಯಸ್ ಅಯ್ಯರ್ ಯಶಸ್ವಿಯಾಗಿದ್ದರು. ಇದೀಗ ಭಾರತದಲ್ಲಿ ಅಫ್ಘಾನಿಸ್ತಾನದ ವಿರುದ್ಧ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ತನ್ನ ಮೊದಲ ಗೆಲುವಿನ ನಿರೀಕ್ಷೆಯಲಿದ್ದಾರೆ. ವಾಸ್ತವವಾಗಿ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಭಾರತದಲ್ಲಿ ಇದು ಮೊದಲ ಟಿ20 ಪಂದ್ಯವಾಗಿದೆ(PC-BCCI).

3 / 5
ಈ ಮೊದಲು ನಾಯಕನಾಗಿ ಮೂರು ಸರಣಿಗಳಲ್ಲಿ ಅಯ್ಯರ್ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಆ ಮೂರು ಸರಣಿಗಳು ವಿದೇಶದಲ್ಲಿ ನಡೆದಿವೆ. ಇದೀಗ ಅಯ್ಯರ್ ತಾಯ್ನಾಡಿನಲ್ಲಿ ನಾಯಕನಾಗಿ ತಂಡವನ್ನು ಮೊದಲ ಬಾರಿಗೆ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಮೊದಲ ಪಂದ್ಯವನ್ನು ಗೆದ್ದು ಭಾರತದಲ್ಲಿ ಉತ್ತಮ ಆರಂಭ ಪಡೆಯುವ ಇರಾದೆಯಲ್ಲಿ ಶ್ರೇಯಸ್ ಅಯ್ಯರ್ ಇದ್ದಾರೆ(PC-BCCI).

4 / 5
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದೆ. ಆದರೆ ಈ ಟಿ20 ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಪಂದ್ಯದ ದಿನದಂದು ದೆಹಲಿಯ ಹವಾಮಾನ ವರದಿ. ಅಕ್ಯೂವೆದರ್ ಪ್ರಕಾರ, ಪಂದ್ಯದ ದಿನವಾದ ಸೆಪ್ಟೆಂಬರ್ 13 ರಂದು ಮಳೆಯಾಗುವ ಸಾಧ್ಯತೆ ಶೇ. 55 ರಷ್ಟು ಇದ್ದು, ರಾತ್ರಿ ವೇಳೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಪಂದ್ಯ ರದ್ದಾಗುವ ಸಾಧ್ಯತೆಗಳಿವೆ(PC-BCCI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್