AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer IPL Auction 2025: ಊಹೆಗೂ ಮೀರಿದ ಮೊತ್ತಕ್ಕೆ ಪಂಜಾಬ್ ಸೇರಿಕೊಂಡ ಶ್ರೇಯಸ್ ಅಯ್ಯರ್

Shreyas Iyer Auction Price: ಕಳೆದ ಸೀಸನ್​ನ ಐಪಿಎಲ್ ಚಾಂಪಿಯನ್ ನಾಯಕ ಶ್ರೇಯಸ್ ಅಯ್ಯರ್ ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಇದೀಗ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Nov 24, 2024 | 4:28 PM

Share
ತನ್ನ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು ಚಾಂಪಿಯನ್ ಮಾಡಿದ್ದ ಶ್ರೇಯಸ್ ಅಯ್ಯರ್, ಈ ಬಾರಿ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತವಾಗಿದೆ. ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ ಅಂತಿಮವಾಗಿ ಶ್ರೇಯಸ್ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ.

1 / 5
2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ಅಯ್ಯರ್​ ಅವರನ್ನು ಖರೀದಿಸಲು ಆರಂಭದಿಂದಲೂ  ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ನಡೆಯಿತು. ಈ ಎರಡು ಫ್ರಾಂಚೈಸಿಗಳನ್ನು ಬಿಟ್ಟು ಬೇರೆ ಫ್ರಾಂಚೈಸಿಗಳಿಗೆ ಅವಕಾಶವೆ ಸಿಗಲಿಲ್ಲ. ಅಂತಿಮವಾಗಿ ಶ್ರೇಯಸ್, ಬರೋಬ್ಬರಿ 26.75 ಕೋಟಿ ರೂ.ಗೆ ಪಂಜಾಬ್ ಪಾಲಾದರು.

2 / 5
ವಾಸ್ತವವಾಗಿ ಹರಾಜಿಗೂ ಮೊದಲು ಶ್ರೇಯಸ್ ಅಯ್ಯರ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾತಿತ್ತು. ಅದರಂತೆ ಡೆಲ್ಲಿ ಕೂಡ ಅಯ್ಯರ್​ಗಾಗಿ ಪ್ರಯತ್ನ ಮಾಡಿತು. ಆದರೆ ಸಫಲವಾಗಲಿಲ್ಲ. ಶ್ರೇಯಸ್ ಪಂಜಾಬ್ ಸೇರಲು ಕಾರಣವೂ ಇದ್ದು, ಈ ಹಿಂದೆ ಡೆಲ್ಲಿ ತಂಡದ ಕೋಚ್ ಆಗಿದ್ದ ರಿಕಿ ಪಾಂಟಿಂಗ್, ಈ ಬಾರಿ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಈ ಮೊದಲು ಶ್ರೇಯಸ್ ಜೊತೆ ಕೆಲಸ ಮಾಡಿದ್ದ ಪಾಂಟಿಂಗ್, ಪಂಜಾಬ್​ನಲ್ಲೂ ಅದೇ ಕೆಲಸವನ್ನು ಮುಂದುವರೆಸಲಿದ್ದಾರೆ.

3 / 5
ಶ್ರೇಯಸ್ ಅಯ್ಯರ್ ಇದುವರೆಗೆ ಐಪಿಎಲ್‌ನಲ್ಲಿ ನಾಯಕನಾಗಿ ಯಶಸ್ವಿಯಾಗಿದ್ದಾರೆ. ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ಚಾಂಪಿಯನ್ ಮಾಡುವುದರ ಜೊತೆಗೆ, ದೆಹಲಿ ತಂಡವನ್ನು ಒಮ್ಮೆ ಫೈನಲ್‌ಗೆ ಕೊಂಡೊಯ್ದಿದ್ದಾರೆ. ಅಂದರೆ ಒತ್ತಡದ ನಡುವೆಯೂ ತಂಡವನ್ನು ಹೇಗೆ ನಡೆಸಬೇಕೆಂಬ ಕಲೆ ಅಯ್ಯರ್​ಗೆ ಚೆನ್ನಾಗಿ ತಿಳಿದಿದೆ.

4 / 5
ಇದಲ್ಲದೇ ಅಯ್ಯರ್ ಬ್ಯಾಟ್ಸ್​ಮನ್ ಆಗಿಯೂ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೇಯಸ್ ಅಯ್ಯರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 115 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 32.24ರ ಸರಾಸರಿಯಲ್ಲಿ 3127 ರನ್ ಗಳಿಸಿದ್ದಾರೆ. ಇದರಲ್ಲಿ 21 ಅರ್ಧಶತಕಗಳು ಸೇರಿವೆ.

5 / 5
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ

ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ