IND vs NZ: ಚೊಚ್ಚಲ ಪಂದ್ಯದಲ್ಲೇ ಶತಕ, ಅರ್ಧಶತಕ ಸಿಡಿಸಿ ದಾಖಲೆ ಮೇಲೆ ದಾಖಲೆ ಬರೆದ ಶ್ರೇಯಸ್ ಅಯ್ಯರ್

Updated By: ಪೃಥ್ವಿಶಂಕರ

Updated on: Nov 28, 2021 | 3:17 PM

IND vs NZ: ಅಯ್ಯರ್ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದರು ಮತ್ತು ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು.

1 / 5
ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ವಿಶೇಷವೇನಲ್ಲ. ಹೆಚ್ಚಿನ ಭಾರತೀಯ ಬ್ಯಾಟ್ಸ್‌ಮನ್‌ಗಳು ಹೆಣಗಾಡುತ್ತಿರುವುದನ್ನು ನೋಡಲಾಗಿದೆ, ಆದರೆ ಈ ಪಂದ್ಯ ಒಬ್ಬ ಬ್ಯಾಟ್ಸ್‌ಮನ್‌ಗೆ ಸಾಕಷ್ಟು ಯಶಸ್ವಿ ಎಂದು ಕರೆಯಬಹುದು. ಈ ಆಟಗಾರನ ಹೆಸರು ಶ್ರೇಯಸ್ ಅಯ್ಯರ್. ಅಯ್ಯರ್ ಈ ಪಂದ್ಯದಿಂದ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದಾರೆ ಮತ್ತು ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ವಿಶಿಷ್ಟ ಕ್ಲಬ್‌ಗೆ ಸೇರಿಕೊಂಡಿದ್ದಾರೆ.

2 / 5
ಅಯ್ಯರ್ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದರು ಮತ್ತು ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದ ಭಾರತದ 16ನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅಯ್ಯರ್ ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೊಮ್ಮೆ ಅದ್ಭುತ ಮಾಡಿ ಅರ್ಧಶತಕವನ್ನು ಗಳಿಸಿದರು. ಅವರು ಎರಡನೇ ಇನ್ನಿಂಗ್ಸ್‌ನಲ್ಲಿ 65 ರನ್ ಗಳಿಸಿದರು. ಇದರೊಂದಿಗೆ ಚೊಚ್ಚಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 5
ದಿಲಾವರ್ ಹುಸೇನ್ ಕೋಲ್ಕತ್ತಾದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಕ್ರಿಕೆಟ್ ತಂಡಕ್ಕಾಗಿ ಮೊದಲ ಬಾರಿಗೆ ಈ ಕೆಲಸವನ್ನು ಮಾಡಿದರು. 1933-34ರಲ್ಲಿ ನಡೆದ ಆ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ದಿಲಾವರ್ 59 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 57 ರನ್ ಗಳಿಸಿದ್ದರು.

4 / 5
ಸುನಿಲ್ ಗವಾಸ್ಕರ್ ಅವರು ತಮ್ಮ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ 50 ಕ್ಕಿಂತ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್. 1970-71ರಲ್ಲಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್‌ನ ಅಪಾಯಕಾರಿ ಬೌಲಿಂಗ್ ದಾಳಿಯ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡುವಲ್ಲಿ ಗವಾಸ್ಕರ್ ಯಶಸ್ವಿಯಾಗಿದ್ದರು. ಗವಾಸ್ಕರ್ ಮೊದಲ ಇನ್ನಿಂಗ್ಸ್‌ನಲ್ಲಿ 65 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 67 ರನ್ ಗಳಿಸಿದರು.

5 / 5
ಅಯ್ಯರ್, ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ್ದರಿಂದ ಈ ಇಬ್ಬರಿಗಿಂತ ಒಂದು ಹೆಜ್ಜೆ ಮುಂದಿದ್ದಾರೆ. ಚೊಚ್ಚಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 50 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ. ಒಟ್ಟಾರೆ ಈ ದಾಖಲೆಯಲ್ಲಿ ಅಯ್ಯರ್ ಅವರ ಸಂಖ್ಯೆ 10ನೇ ಸ್ಥಾನದಲ್ಲಿದೆ.