ಶ್ರೇಯಸ್ ಅಯ್ಯರ್ ಗಾಯದಿಂದಾಗಿ ಟೀಮ್ ಇಂಡಿಯಾಗೆ ಹಿನ್ನಡೆ..!

Updated on: Oct 30, 2025 | 8:31 AM

Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವೈದ್ಯರ ಮೇಲ್ವಿಚಾರಣೆಯಲ್ಲಿರುವ ಅಯ್ಯರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಇನ್ನೊಂದು ವಾರದಲ್ಲಿ ಅವರು ಭಾರತಕ್ಕೆ ಮರಳುವ ಸಾಧ್ಯತೆಯಿದೆ.

1 / 6
ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದ ಅಯ್ಯರ್ ಇದೀಗ ಚೇತರಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ.

2 / 6
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್​ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.

3 / 6
ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಇದರಿಂದಾಗಿ ಅವರು ಅಸ್ವಸ್ಥರಾಗಿದ್ದರು. ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್‌ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

4 / 6
ಇದೀಗ ಚೇತರಿಸಿಕೊಂಡಿರುವ ಅವರನ್ನು ICUನಿಂದ  ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಇನ್ನೊಂದು ವಾರದಲ್ಲಿ ಶ್ರೇಯಸ್ ಅಯ್ಯರ್ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ. ಇದಾಗ್ಯೂ ಅವರು ಸದ್ಯಕ್ಕಂತು ಮೈದಾನಕ್ಕಿಳಿಯುವುದಿಲ್ಲ. ಅಂದರೆ ಕನಿಷ್ಠ 2 ತಿಂಗಳುಗಳ ಕಾಲ ಅವರು ವಿಶ್ರಾಂತಿ ಪಡೆಯಬೇಕಿದೆ.

5 / 6
ಈ ಎರಡು ತಿಂಗಳುಗಳ ನಡುವೆ ಟೀಮ್ ಇಂಡಿಯಾ 2 ಪ್ರಮುಖ ಸರಣಿಗಳನ್ನು ಆಡಲಿದೆ. ನವೆಂಬರ್-ಡಿಸೆಂಬರ್​ನಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಸರಣಿ ಆಡಲಿದೆ. ಇದಾದ ಬಳಿಕ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಸಿದ್ಧವಾಗಲಿದ್ದಾರೆ. ಈ ಎರಡೂ ಸರಣಿಗಳಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

6 / 6
ಏಕೆಂದರೆ ಶ್ರೇಯಸ್ ಅಯ್ಯರ್ ಸಂಪೂರ್ಣವಾಗಿ ಗುಣಮುಖರಾಗಲು ಕನಿಷ್ಠ 2 ತಿಂಗಳುಗಳನ್ನು ತೆಗೆದುಕೊಳ್ಳಲಿದ್ದು, ಇದಾದ ಬಳಿಕ ಫಿಟ್​ನೆಸ್​ ಟೆಸ್ಟ್​ಗೆ ಒಳಗಾಗಲಿದ್ದಾರೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಜನವರಿ ತನಕ ಕಾಯಬೇಕಾಗಿ ಬರಬಹುದು. ಇತ್ತ ಭಾರತ ಏಕದಿನ ತಂಡದ ಆಧಾರಸ್ತಂಭವಾಗಿದ್ದ ಅಯ್ಯರ್ ಅನುಪಸ್ಥಿತಿಯು ಮುಂಬರುವ ಸರಣಿಗಳಲ್ಲಿ ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.