ಐಪಿಎಲ್ ನಡುವೆ ಟೀಂ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಿಂದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಹೊರಗುಳಿದಿದ್ದಾರೆ.
ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಈ ಬಾರಿಯ ಐಪಿಎಲ್ ಜೊತೆಗೆ ಆಸ್ಟ್ರೇಲಿಯಾ ವಿರುದ್ಧ ನಡೆಯಲ್ಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಿಂದಲೂ ಹೊರಬಿದ್ದಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೋ ವೆಬ್‌ಸೈಟ್ ವರದಿ ಮಾಡಿದೆ.
ಈ ಹಿಂದೆ ಐಪಿಎಲ್‌ನ ಮಧ್ಯದಲ್ಲಿ ಅಯ್ಯರ್ ಕೆಕೆಆರ್ ತಂಡಕ್ಕೆ ಎಂಟ್ರಿಕೊಡಲಿದ್ದಾರೆ ಎಂಬ ವರದಿಗಳು ಇದ್ದವು. ಆದರೆ ಪ್ರಸ್ತುತ ಐಪಿಎಲ್ ಸೀಸನ್‌ನಿಂದಲೂ ಅವರನ್ನು ಹೊರಗಿಡಲಾಗಿದೆ ಎಂದು ವೆಬ್‌ಸೈಟ್ ವರದಿ ಮಾಡಿದೆ. ಕಳೆದ ವರ್ಷವಷ್ಟೇ ಕೋಲ್ಕತ್ತಾ ಅವರನ್ನು ಖರೀದಿಸಿ ನಾಯಕರನ್ನಾಗಿಯೂ ಮಾಡಿತ್ತು. ಆದರೆ ಇದೀಗ ಶ್ರೇಯಸ್ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ.
ಸದ್ಯ ಐಪಿಎಲ್ ಹಾಗೂ ಡಬ್ಲ್ಯುಟಿಸಿ ಫೈನಲ್‌ನಿಂದ ಹೊರಬಿದ್ದಿರುವ ಅಯ್ಯರ್ ಶಸ್ತ್ರಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಲಿದ್ದಾರೆ ಎಂದು ವೆಬ್‌ಸೈಟ್ ತನ್ನ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಇದರಿಂದಾಗಿ ಅಯ್ಯರ್ ಮೂರು ತಿಂಗಳು ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ವರದಿ ಮಾಡಿದೆ.
2021 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಅಯ್ಯರ್, ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಅಂದಿನಿಂದ ಭಾರತದ ಟೆಸ್ಟ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿರುವ ಅಯ್ಯರ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡದಿರುವುದು ಟೀಂ ಇಂಡಿಯಾಕ್ಕೆ ಹಿನ್ನಡೆಯುಂಟು ಮಾಡಿದೆ.
Published On - 5:31 pm, Wed, 5 April 23