Shreyas Iyer: ದ್ವಿತೀಯ ಟೆಸ್ಟ್ಗೆ ಭಾರತದ ಸ್ಟಾರ್ ಬ್ಯಾಟ್ಸ್ಮನ್ ಕಮ್ಬ್ಯಾಕ್?: ಫಿಟ್ನೆಸ್ ಟೆಸ್ಟ್ ಪಾಸ್ ಆಗಲು ಹರಸಾಹಸ
India vs Australia 2nd Test: ಇಂಜುರಿಯಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನಿಂದ ಹೊರಬಿದ್ದಿದ್ದ ಶ್ರೇಯಸ್ ಅಯ್ಯರ್ ಇದೀಗ ಎರಡನೇ ಟೆಸ್ಟ್ಗೆ ಭಾರತ ತಂಡ ಸೇರಿಕೊಳ್ಳಲು ತಯಾರಾಗಿದ್ದಾರೆ.
1 / 8
ಬಾರ್ಡರ್- ಗವಾಸ್ಕರ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಗೆದ್ದು ಬೀಗಿರುವ ಭಾರತ ಇದೀಗ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಪ್ರಥಮ ಪಂದ್ಯದಲ್ಲಿ ಜಡೇಜಾ- ಅಶ್ವಿನ್ ಸ್ಪಿನ್ ದಾಳಿಗೆ ನಲುಗಿದ ಕಾಂಗರೂ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಿತ್ತು. ಟೀಮ್ ಇಂಡಿಯಾ ಬೌಲಿಂಗ್ ಪಡೆ ಬಲಿಷ್ಠವಾಗಿದೆ. ಆದರೆ, ಬ್ಯಾಟಿಂಗ್ನಲ್ಲಿ ಇನ್ನಷ್ಟು ಸುಧಾರಣೆ ಕಾಣಬೇಕಿದೆ.
2 / 8
ಮೊದಲ ಟೆಸ್ಟ್ನಲ್ಲಿ ರೋಹಿತ್ ಶರ್ಮಾ, ಜಡೇಜಾ ಹಾಗೂ ಅಕ್ಷರ್ ಪಟೇಲ್ ಬಿಟ್ಟರೆ ಇತರೆ ಬ್ಯಾಟರ್ಗಳು ವೈಫಲ್ಯ ಅನುಭವಿಸಿದರು. ಹೀಗಾಗಿ ಮತ್ತೊಬ್ಬ ಬ್ಯಾಟರ್ ಅನ್ನು ತಂಡಕ್ಕೆ ಸೇರಿಸಿಕೊಳ್ಳಲು ರೋಹಿತ್ ಪಡೆ ಮುಂದಾಗಿದೆ. ಅವರೇ ಶ್ರೇಯಸ್ ಅಯ್ಯರ್.
3 / 8
ಇಂಜುರಿಯಿಂದಾಗಿ ಮೊದಲ ಟೆಸ್ಟ್ನಿಂದ ಹೊರಬಿದ್ದಿದ್ದ ಅಯ್ಯರ್ ಇದೀಗ ಎರಡನೇ ಟೆಸ್ಟ್ಗೆ ಭಾರತ ತಂಡ ಸೇರಿಕೊಳ್ಳಲು ತಯಾರಾಗಿದ್ದಾರೆ. ಸದ್ಯ ಅಯ್ಯರ್ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು ಫಿಟ್ನೆಸ್ ಪರೀಕ್ಷೆಗೆ ಕಾದುಕುಳಿತಿದ್ದಾರೆ.
4 / 8
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಅಯ್ಯರ್ ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಹೊತ್ತಿಗೆ ಗುಣಮುಖರಾಗಿರಲಿಲ್ಲ. ಹೀಗಾಗಿ ಇವರನ್ನು ಎರಡನೇ ಟೆಸ್ಟ್ನಿಂದ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಬಿಸಿಸಿಐ ಹೇಳಿತ್ತು.
5 / 8
ಇದೀಗ ಸಂಪೂರ್ಣ ಗುಣಮುಖರಾಗಿರುವ ಅಯ್ಯರ್ ಮಂಗಳವಾರ ಫಿಟ್ನೆಸ್ ಪರೀಕ್ಷೆಗೆ ಒಳಪಡಲಿದ್ದಾರೆ. ಇದರಲ್ಲಿ ತೇರ್ಗಡೆ ಹೊಂದಿದರೆ ಗುರುವಾರ ದೆಹಲಿಗೆ ಪ್ರಯಾಣ ಬೆಳೆಸಿ ತಂಡ ಸೇರಿಕೊಳ್ಳಲಿದ್ದಾರೆ. ಇವರು ಪ್ಲೇಯಿಂಗ್ ಇಲೆವೆನ್ನಲ್ಲೂ ಸ್ಥಾನ ಪಡೆಯುವುದು ಬಹತೇಕ ಖಚಿತವಾಗಿದೆ.
6 / 8
ಮೊದಲ ಟೆಸ್ಟ್ನಲ್ಲಿ ಪದಾರ್ಪಣೆ ಮಾಡಿದ್ದ ಇಬ್ಬರು ಪ್ಲೇಯರ್ಸ್ ಸೂರ್ಯಕುಮಾರ್ ಯಾದವ್ ಹಾಗೂ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇವರಿಬ್ಬರ ಪೈಕಿ ಒಬ್ಬರ ಜಾಗ ಅಯ್ಯರ್ ತುಂಬಲಿದ್ದಾರೆ.
7 / 8
ಭಾರತ ಪರ ಇದುವರೆಗೆ 7 ಟೆಸ್ಟ್ ಪಂದ್ಯಗಳಲ್ಲಿ 12 ಇನಿಂಗ್ಸ್ ಆಡಿರುವ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.
8 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಪಂದ್ಯ ಫೆಬ್ರವರಿ 17 ರಿಂದ ಫೆಬ್ರವರಿ 21 ರವರೆಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವುದರಿಂದ ಟೀಮ್ ಇಂಡಿಯಾ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.