AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್ ಈಗ ಹೇಗಿದ್ದಾರೆ? ಫೋಟೋದೊಂದಿಗೆ ಹೊರಬಿತ್ತು ಹೊಸ ಮಾಹಿತಿ

Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವೈದ್ಯರ ಮೇಲ್ವಿಚಾರಣೆಯಲ್ಲಿರುವ ಅಯ್ಯರ್ ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 11, 2025 | 7:54 AM

Share
ಭಾರತ ಏಕದಿನ ತಂಡದ ಉಪ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಈಗ ಹೇಗಿದ್ದಾರೆ? ಈ ಪ್ರಶ್ನೆಗೆ ಕೊನೆಗೂ ಅಯ್ಯರ್ ಕಡೆಯಿಂದಲೇ ಉತ್ತರ ಸಿಕ್ಕಿದೆ. ಅದು ಸಹ ನಗು ಮುಖದೊಂದಿಗೆ ಎಂಬುದು ಸಂತಸದ ಸುದ್ದಿ. ಅಕ್ಟೋಬರ್ 25 ರಂದು ನಡೆದ  ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು.

1 / 5
ಸಿಡ್ನಿಯಲ್ಲಿ ನಡೆದ ಈ ಪಂದ್ಯದಲ್ಲಿ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್​ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿತ್ತು.

2 / 5
ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್‌ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

3 / 5
ಇದೀಗ ಚೇತರಿಸಿಕೊಂಡಿರುವ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಇದಾಗ್ಯೂ ವೈದ್ಯಕೀಯ ಮೇಲ್ವಿಚಾರಣೆಗಾಗಿ ಅವರು ಸಿಡ್ನಿಯಲ್ಲೇ ಉಳಿದಿದ್ದಾರೆ. ಸದ್ಯ ಸಿಡ್ನಿಯಲ್ಲಿರುವ ಅಯ್ಯರ್ ತಮ್ಮ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಆರೋಗ್ಯದ ಮಾಹಿತಿ ನೀಡಿದ್ದಾರೆ.

4 / 5
ಸಿಡ್ನಿ ಬೀಚ್​ನಲ್ಲಿ ಕೂತಿರುವ ಫೋಟೋ ಹಂಚಿಕೊಂಡಿರುವ ಶ್ರೇಯಸ್ ಅಯ್ಯರ್... "ಸೂರ್ಯನಿಂದ ಉತ್ತಮ ಥೆರಪಿ ಸಿಕ್ಕಿದೆ. ಮತ್ತೆ ಬಂದಿರುವುದ್ದಕ್ಕೆ ಕೃತಜ್ಞತೆಗಳು. ನಿಮ್ಮೆಲ್ಲರ ಪ್ರೀತಿ ಮತ್ತು ಕಾಳಜಿಗೆ ಧನ್ಯವಾದಗಳು" ಎಂದು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದಿದ್ದಾರೆ. ಇದರೊಂದಿಗೆ ಶ್ರೇಯಸ್ ಅಯ್ಯರ್ ಸಂಪೂರ್ಣ ಫಿಟ್​ ಆಗಿರುವುದು ಖಚಿತವಾಗಿದೆ. ಅಲ್ಲದೆ ಶ್ರೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.

5 / 5

Published On - 7:54 am, Tue, 11 November 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!