AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕತ್ವದಲ್ಲಿ ಅಯ್ಯರ್ ಎಡವಟ್ಟು; ಧೋನಿ-ಕೊಹ್ಲಿಯನ್ನೇ ಹಿಂದಿಕ್ಕಿದ ಶ್ರೇಯಸ್

ಶ್ರೇಯಸ್ ಅಯ್ಯರ್ ಟಿ20 ನಾಯಕತ್ವದಲ್ಲಿ ಭಾರತ ತಂಡ ಸಾಕಷ್ಟು ಏರಿಳಿತ ಕಂಡಿದೆ. 190ಕ್ಕೂ ಹೆಚ್ಚು ರನ್‌ಗಳ ಮೊತ್ತವನ್ನು ರಕ್ಷಿಸುವಲ್ಲಿ ಮೂರು ಬಾರಿ ವಿಫಲವಾಗಿ, ಎಂ.ಎಸ್. ಧೋನಿ ಮತ್ತು ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮೀರಿಸುವ ಬೇಡದ ದಾಖಲೆ ನಿರ್ಮಿಸಿದ್ದಾರೆ. 24 ಪಂದ್ಯಗಳಲ್ಲಿ 10 ಸೋಲುಗಳೊಂದಿಗೆ ಅವರ ನಾಯಕತ್ವದ ಪ್ರದರ್ಶನವು ಚರ್ಚೆಗೆ ಗ್ರಾಸವಾಗಿದೆ.

ಪೃಥ್ವಿಶಂಕರ
|

Updated on: Nov 01, 2026 | 7:09 PM

Share
ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಟಿ20 ನಾಯಕತ್ವ ವಹಿಸಿಕೊಂಡ ಬಳಿಕ ತಂಡದ ಪ್ರದರ್ಶನದಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿವೆ. ಅವರ ನಾಯಕತ್ವದಲ್ಲಿ ಮೊದಲ ಎರಡು ಸರಣಿಗಳಲ್ಲಿ ಭಾರತ ಸತತ ಸೋಲು ಅನುಭವಿಸಿತ್ತು. ಆ ಬಳಿಕ ಎರಡು ಸರಣಿಗಳನ್ನು ಗೆದ್ದುಕೊಂಡಿದ್ದರೂ, ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆದ ಸರಣಿ ಡ್ರಾದಲ್ಲಿ ಅಂತ್ಯಗೊಂಡಿತ್ತು. ಇನ್ನು ನ್ಯೂಜಿಲೆಂಡ್ ಪ್ರವಾಸದಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದ್ದರೂ, ಕೊನೆಯ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದೆ(PC-PTI).

1 / 6
ಹ್ಯಾಮಿಲ್ಟನ್ ಮೈದಾನದಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿನ ಸೋಲಿನೊಂದಿಗೆ ನಾಯಕ ಶ್ರೇಯಸ್ ಅಯ್ಯರ್ ಹೆಸರಿನಲ್ಲಿ ಬೇಡದ ದಾಖಲೆಯೊಂದು ನಿರ್ಮಾಣವಾಗಿದೆ. ಈ ಮೂಲಕ ಟೀಂ ಇಂಡಿಯಾದ ಮಾಜಿ ನಾಯಕರಾದ ಎಂಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಯ್ಯರ್ ಹಿಂದಿಕ್ಕಿದ್ದಾರೆ(PC-PTI).

2 / 6
ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ತಂಡ 190 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಮೊತ್ತವನ್ನು ರಕ್ಷಿಸಿಕೊಳ್ಳುವಲ್ಲಿ ಮೂರು ಬಾರಿ ವಿಫಲವಾಗಿದೆ. ಅಯ್ಯರ್ ನಾಯಕತ್ವದ 24ನೇ ಪಂದ್ಯದಲ್ಲಿ ಭಾರತ ಈ ದಾಖಲೆಯ ಮೂರನೇ ಸೋಲನ್ನು ಕಂಡಿದೆ(PC-PTI).

3 / 6
ಇದಕ್ಕೂ ಮೊದಲು ಈ ಬೇಡದ ದಾಖಲೆ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಇಬ್ಬರೂ ನಾಯಕರು ತಲಾ ಎರಡು ಬಾರಿ 190ಕ್ಕೂ ಹೆಚ್ಚು ರನ್‌ಗಳ ಮೊತ್ತವನ್ನು ರಕ್ಷಿಸಿಕೊಳ್ಳುವಲ್ಲಿ ವಿಫಲರಾಗಿದ್ದರು(PC-PTI).

4 / 6
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಸೋಲು ಕಂಡ ಬಳಿಕ ಶ್ರೇಯಸ್ ಅಯ್ಯರ್ ಮತ್ತೊಂದು ಬೇಡದ ದಾಖಲೆಯತ್ತ ಸಾಗಿದ್ದಾರೆ. ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ಇದುವರೆಗೆ ಆಡಿರುವ 24 ಪಂದ್ಯಗಳಲ್ಲಿ 10 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ(PC-PTI).

5 / 6
ಇದರೊಂದಿಗೆ ಅಯ್ಯರ್ ಟಿ20 ನಾಯಕತ್ವದಲ್ಲಿ ಅತಿ ಹೆಚ್ಚು ಸೋಲು ಕಂಡ ನಾಯಕರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರ ಸಮೀಪಕ್ಕೆ ಬಂದಿದ್ದಾರೆ. ರೋಹಿತ್ ಶರ್ಮಾ ಭಾರತ ತಂಡವನ್ನು 62 ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದು, ಈ ಪೈಕಿ ಕೇವಲ 12 ಪಂದ್ಯಗಳಲ್ಲಿ ಮಾತ್ರ ಸೋಲು ಕಂಡಿದ್ದಾರೆ(PC-PTI).

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
"ಹಿಟ್ ಅಂಡ್ ರನ್ ಮಾಡಲು ನಾನೇನು ಕುಮಾರಸ್ವಾಮಿನಾ?"
ರಾಜ್ಯೋತ್ಸವ ಸಂಭ್ರಮದ ನಡುವೆ ಮದ್ಯಪ್ರಿಯರ ಎಡವಟ್ಟು

ಬಿಜೆಪಿಗೆ ವಾಪಸಾಗಲು ಯತ್ನಾಳ್ ಹಾಕಿದ್ರು 2 ಕಂಡಿಷನ್‌! ಏನದು? ಇಲ್ಲಿದೆ ನೋಡಿ

ನವೆಂಬರ್ 2 ರಿಂದ 8 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಸ್ಟಿಂಗ್: ಸರ್ಕಾರ ಯಾರನ್ನು ರಕ್ಷಿಸುತ್ತಿದೆ? ಪ್ರಲ್ಹಾದ್ ಜೋಶಿ ಪ್ರಶ್ನೆ

ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸೌಲಭ್ಯ!

‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತು

ಕಿಚ್ಚ ಸುದೀಪ್ ಎದುರಲ್ಲೇ ಬಿಗ್ ಬಾಸ್ ಸ್ಪರ್ಧಿಗಳ ಆರೋಪ, ಪ್ರತ್ಯಾರೋಪ

ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು

ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ