ಐಪಿಎಲ್ ಹರಾಜಿಗೂ ಮುನ್ನ ಮುಂಬೈ ತಂಡದ ನಾಯಕತ್ವ ವಹಿಸಿಕೊಂಡ ಶ್ರೇಯಸ್ ಅಯ್ಯರ್

Shreyas Iyer: ಮುಂಬೈ ಕ್ರಿಕೆಟ್ ಸಂಸ್ಥೆಯ ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ. ಅಯ್ಯರ್ ಅವರ ಯಶಸ್ವಿ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಈ ದೊಡ್ಡ ಜವಾಬ್ದಾರಿಯನ್ನು ಅವರಿಗೆ ನೀಡಿದೆ.

ಪೃಥ್ವಿಶಂಕರ
|

Updated on: Nov 17, 2024 | 5:20 PM

2025 ರ ಐಪಿಎಲ್​ನ ಮೆಗಾ ಹರಾಜು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಈ ಹರಾಜಿನಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಸೀಸನ್​ನಲ್ಲಿ ಶ್ರೇಯಸ್ ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡಿದ್ದರು. ಆದರೆ ಈ ಬಾರಿ ಕೆಕೆಆರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ.

1 / 7
ಈ ಬಗ್ಗೆ ನಾನಾ ಹೇಳಿಕೆಗಳು ಈಗಾಗಲೇ ಹೊರಬಿದ್ದಿವೆ. ಇದೀಗ ಅಯ್ಯರ್ ಹೊಸ ತಂಡವನ್ನು ಸೇರುವ ತವಕದಲ್ಲಿದ್ದಾರೆ. ವಾಸ್ತವವಾಗಿ ಐಪಿಎಲ್‌ನಲ್ಲಿ ಅಯ್ಯರ್ ಅವರ ನಾಯಕತ್ವದ ದಾಖಲೆಯು ಅತ್ಯುತ್ತಮವಾಗಿದೆ. ಆದ್ದರಿಂದ ಮೆಗಾ ಹರಾಜಿನಲ್ಲಿ ಅವರಿಗೆ ಹೆಚ್ಚಿನ ಬೇಡಿಕೆಯಿದೆ. ಇದಕ್ಕೆ ಪೂರಕವಾಗಿ ಅನೇಕ ತಂಡಗಳು ಈ ಬಾರಿ ಹೊಸ ನಾಯಕರನ್ನು ಹುಡುಕುತ್ತಿವೆ. ಇದೆಲ್ಲದರ ನಡುವೆ ಅಯ್ಯರ್‌ ಮತ್ತೊಮ್ಮೆ ನಾಯಕನಾಗಿ ಕಾಣಿಸಿಕೊಳ್ಳಲು ಸಿದ್ದರಾಗಿದ್ದಾರೆ.

2 / 7
ವಾಸ್ತವವಾಗಿ ಮುಂಬೈ ಕ್ರಿಕೆಟ್ ಸಂಸ್ಥೆಯ (ಎಂಸಿಎ) ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ. ಅಯ್ಯರ್ ಅವರ ಯಶಸ್ವಿ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಈ ದೊಡ್ಡ ಜವಾಬ್ದಾರಿಯನ್ನು ಅವರಿಗೆ ನೀಡಿದೆ.

3 / 7
 ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಇದೇ ನವೆಂಬರ್ 23 ರಿಂದ ಪ್ರಾರಂಭವಾಗಲಿದೆ. ಕಳೆದ ಬಾರಿ ಈ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ, ಮುಂಬೈ ತಂಡವನ್ನು ಮುನ್ನಡೆಸಿದ್ದರು. ಇದೀಗ ರಹಾನೆ ಬದಲಿಗೆ ಅಯ್ಯರ್ ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಅಜಿಂಕ್ಯ ರಹಾನೆ ಈಗ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ.

4 / 7
ವರದಿಯ ಪ್ರಕಾರ, ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ಟಿ20 ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ಪೃಥ್ವಿ ಶಾ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅಜಿಂಕ್ಯ ರಹಾನೆ ಆಟಗಾರನಾಗಿ ತಂಡದಲ್ಲಿ ಕಾಣಿಸಿಕೊಂಡರೆ, ಇನ್ನು ರಣಜಿ ಟ್ರೋಫಿ ಸಮಯದಲ್ಲಿ ತನ್ನ ಫಿಟ್ನೆಸ್ ಕಾರಣಗಳಿಂದ ತಂಡದಿಂದ ಹೊರಬಿದ್ದಿದ್ದ  ಪೃಥ್ವಿ ಶಾ, ಇದೀಗ ಮತ್ತೊಮ್ಮೆ ತಂಡ ಸೇರಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

5 / 7
ಇನ್ನು ಮೆಗಾ ಹರಾಜಿನ ವಿಷಯಕ್ಕೆ ಬರುವುದಾದರೆ.. ಶ್ರೇಯಸ್ ಅಯ್ಯರ್, ಮೆಗಾ ಹರಾಜಿನಲ್ಲಿ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ.ಗೆ ನಿಗದಿಪಡಿಸಿದ್ದು, ಅವರ ಹೆಸರು ಮೊದಲ ಸೆಟ್‌ನಲ್ಲಿಯೇ ಕಾಣಿಸಿಕೊಳ್ಳಲಿದೆ. ಅಂದರೆ ಮೆಗಾ ಹರಾಜಿನ ಆರಂಭದಲ್ಲಿಯೇ ಅಯ್ಯರ್‌ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

6 / 7
ಶ್ರೇಯಸ್ ಅಯ್ಯರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 115 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 32.24ರ ಸರಾಸರಿಯಲ್ಲಿ 3127 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡುವುದರ ಜೊತೆಗೆ, ದೆಹಲಿ ತಂಡವನ್ನು ಒಮ್ಮೆ ಫೈನಲ್‌ಗೆ ಕೊಂಡೊಯ್ದಿದ್ದಾರೆ.

7 / 7
Follow us
ಹಗಲೆಲ್ಲ ಬಸನಗೌಡ ಯತ್ನಾಳ್ ವಿಷಯದಲ್ಲಿ ಮಾತಾಡುವುದು ಇಷ್ಟವಿಲ್ಲ: ವಿಜಯೇಂದ್ರ

ನಿತೀಶ್ ರಿವರ್ಸ್ ರ್ಯಾಂಪ್ ಶಾಟ್ ಸಿಕ್ಸರ್​ಗೆ ಬೆಚ್ಚಿದ ಆಸೀಸ್

ಯತ್ನಾಳ್ ಲಿಂಗಾಯತರ ಕ್ಷಮಾಪಣೆ ಕೇಳಿ ಗೌರವ ಉಳಿಸಿಕೊಳ್ಳಲಿ: ಸ್ವಾಮೀಜಿ

ಆಕಾಶದಲ್ಲಿ ಹಾರಾಡಿದ ಸರ್ಕಾರಿ ಶಾಲೆ ಮಕ್ಕಳು: ವಿಮಾನದಲ್ಲಿ ಪ್ರವಾಸ

ಆನೇಕಲ್: ಗಂಗೊಂಡಹಳ್ಳಿಯಲ್ಲಿ ಜಮೀನಿಗೆ ನುಗ್ಗಿದ 8 ಕಾಡಾನೆಗಳ ಹಿಂಡು

ಮಾತಾಡಿದರೆ ಯತ್ನಾಳ್ ಸರಿಹೋಗುತ್ತಾರೆ, ಸಮಸ್ಯೆಯೇನೂ ಇಲ್ಲ: ಯಡಿಯೂರಪ್ಪ

ಅಂಬೇಡ್ಕರ್ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನವೆಂದು ಆಚರಣೆ

ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲಾಗದು: ಪ್ರಲ್ಹಾದ್ ಜೋಶಿ

ಬಣ ಬಡಿದಾಟ ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ: ಅನ್ನದಾನಿ, ಶಾಸಕ

ನಿತ್ಯ ಗಂಡ ಹೆಂಡತಿ ನಡುವಿನ ಕಲಹಕ್ಕೆ ಉಪಾಯವೇನು? ವಿಡಿಯೋ ನೋಡಿ