SMAT 2024: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ 2024 ರಲ್ಲಿ ಮುಂಬೈ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಧ್ಯ ಪ್ರದೇಶ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 17.5 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ತಂಡವು 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.