AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟೆಸ್ಟ್​ನಲ್ಲಿ ಈ ಸಾಧನೆ ಮಾಡಿದ 4ನೇ ಭಾರತೀಯ ಶುಭ್​ಮನ್ ಗಿಲ್

Shubman Gill: ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ನಾಯಕನಾಗಿ ತಮ್ಮ ಮೊದಲ ಟೆಸ್ಟ್ ಅರ್ಧಶತಕ ಗಳಿಸಿದರು. ಈ ಸಾಧನೆಯೊಂದಿಗೆ, ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 3,000 ರನ್ ಪೂರೈಸಿದರು. ಕಪಿಲ್ ದೇವ್ ಅವರನ್ನು ಹಿಂದಿಕ್ಕಿ, 3,000 ಟೆಸ್ಟ್ ರನ್ ಗಳಿಸಿದ ನಾಲ್ಕನೇ ಕಿರಿಯ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ. ಇದು ಭಾರತೀಯ ಕ್ರಿಕೆಟ್‌ಗೆ ಒಂದು ಮಹತ್ವದ ಮೈಲಿಗಲ್ಲು.

ಪೃಥ್ವಿಶಂಕರ
|

Updated on: Aug 23, 2026 | 3:16 PM

Share
ಕೊಲಂಬೊದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ 50 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಮೂಲಕ ನಾಯಕನಾಗಿ ಶ್ರೀಲಂಕಾದಲ್ಲಿ ಮೊದಲ ಟೆಸ್ಟ್ ಅರ್ಧಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಈ ಅರ್ಧಶತಕದ ಇನ್ನಿಂಗ್ಸ್ ಜೊತೆಗೆ ಗಿಲ್  ಪ್ರಮುಖ ಮೈಲಿಗಲ್ಲನ್ನು ದಾಟಿದರು(PC-BCCI).

1 / 5
ನಾಯಕನಾದ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಶುಭ್​ಮನ್ ಗಿಲ್ ಟೆಸ್ಟ್ ಕ್ರಿಕೆಟ್‌ನಲ್ಲಿ 3,000 ರನ್ ಪೂರೈಸುವ ಮೂಲಕ ಭಾರತೀಯ ಕ್ರಿಕೆಟ್‌ನಲ್ಲಿ ವಿಶಿಷ್ಟ ದಾಖಲೆಯನ್ನು ನಿರ್ಮಿಸಿದರು. ಈ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಗಿಲ್, ಟೆಸ್ಟ್ ಕ್ರಿಕೆಟ್‌ನಲ್ಲಿ 3,000 ರನ್ ಗಳಿಸಿದ ನಾಲ್ಕನೇ ಕಿರಿಯ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ(PC-BCCI).

2 / 5
ಈ ಪಂದ್ಯಕ್ಕೆ ಮೊದಲು 3,000 ಟೆಸ್ಟ್ ರನ್ ತಲುಪಲು ಗಿಲ್​ಗೆ ಕೇವಲ ಏಳು ರನ್‌ಗಳು ಬೇಕಾಗಿದ್ದವು. ಗಾಲೆಯಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್‌ನಲ್ಲಿ ಅವರು ಈ ಮೈಲಿಗಲ್ಲು ತಲುಪಲು ವಿಫಲರಾಗಿದ್ದರು. ಆದಾಗ್ಯೂ, ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ 23 ನೇ ಓವರ್‌ನಲ್ಲಿ ಕೇಸರ ನುವಂತಾ ಅವರ ಬೌಲಿಂಗ್​ನಲ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ 3,000 ಟೆಸ್ಟ್ ರನ್‌ಗಳನ್ನು ಪೂರ್ಣಗೊಳಿಸಿದರು(PC-BCCI).

3 / 5
ಗಿಲ್ 26 ವರ್ಷ 349 ದಿನಗಳಲ್ಲಿ ಈ ಸಾಧನೆ ಮಾಡಿದರು. ಇದರೊಂದಿಗೆ, ಅವರು ಭಾರತದ ಮಾಜಿ ನಾಯಕ ಮತ್ತು ಶ್ರೇಷ್ಠ ಆಲ್‌ರೌಂಡರ್ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದರು. ಕಪಿಲ್ ದೇವ್ 26 ವರ್ಷ 356 ದಿನಗಳಲ್ಲಿ 3,000 ಟೆಸ್ಟ್ ರನ್‌ಗಳನ್ನು ಪೂರೈಸಿದ್ದರು(PC-BCCI).

4 / 5
ಟೆಸ್ಟ್ ಕ್ರಿಕೆಟ್‌ನಲ್ಲಿ 3,000 ಟೆಸ್ಟ್ ರನ್‌ಗಳನ್ನು ತಲುಪಿದ ಅತ್ಯಂತ ಕಿರಿಯ ಭಾರತೀಯ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ ಕೇವಲ 23 ವರ್ಷ 228 ದಿನಗಳಲ್ಲಿ ಈ ಸಾಧನೆ ಮಾಡಿದ್ದರು. ವೀರೇಂದ್ರ ಸೆಹ್ವಾಗ್ 26 ವರ್ಷ 157 ದಿನಗಳಲ್ಲಿ ಈ ಸಾಧನೆ ಮಾಡುವ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ದಿಲೀಪ್ ವೆಂಗ್‌ಸರ್ಕಾರ್ 26 ವರ್ಷ 263 ದಿನಗಳಲ್ಲಿ ಈ ಮೈಲಿಗಲ್ಲು ತಲುಪಿದ್ದರು(PC-PTI).

5 / 5
Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ

ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ

ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್

ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ

ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?

ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ

ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ