IND vs ENG: ಇಂಗ್ಲೆಂಡ್​ನಲ್ಲಿ ಈ ದಾಖಲೆ ಮಾಡಿದ ಮೊದಲ ಏಷ್ಯನ್ ಶುಭ್​ಮನ್ ಗಿಲ್

Updated on: Jul 27, 2025 | 7:17 PM

Shubman Gill's Record-Breaking England Tour: ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 700 ಕ್ಕೂ ಹೆಚ್ಚು ರನ್ ಗಳಿಸಿ ಇಂಗ್ಲೆಂಡ್ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ಏಷ್ಯಾದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಮ್ಯಾಂಚೆಸ್ಟರ್ ಪಂದ್ಯದಲ್ಲಿ ಶತಕ ಸಿಡಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅವರು ಟೆಸ್ಟ್ ಸರಣಿಯಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಎಂಟನೇ ನಾಯಕ ಕೂಡ ಆಗಿದ್ದಾರೆ.

1 / 6
ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಸರಣಿಯ ಬಹುತೇಕ ಎಲ್ಲಾ ಟೆಸ್ಟ್ ಪಂದ್ಯಗಳಲ್ಲಿ ಅವರು ಸ್ಥಿರವಾಗಿ ಉತ್ತಮವಾಗಿ ಬ್ಯಾಟಿಂಗ್ ಮಾಡಿ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಒತ್ತಡ ಹೇರಿದ್ದಾರೆ. ಇದೀಗ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿಯೂ ಗಿಲ್ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.

2 / 6
ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿರುವ ಶುಭಮನ್ ಗಿಲ್, ಇಂಗ್ಲೆಂಡ್‌ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲೆಂಡ್‌ನಲ್ಲಿ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ಏಷ್ಯಾದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಭಾರತದ ನಾಯಕ ಗಿಲ್ ಪಾತ್ರರಾಗಿದ್ದಾರೆ.

3 / 6
ಶುಭಮನ್ ಗಿಲ್ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಏಷ್ಯಾದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಷ್ಟೇ ಅಲ್ಲ, ಟೆಸ್ಟ್ ಸರಣಿಯೊಂದರಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಎಂಟನೇ ನಾಯಕ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

4 / 6
ಶುಭ್​ಮನ್​ ಗಿಲ್​ಗೂ ಮೊದಲು, ಆಸ್ಟ್ರೇಲಿಯಾ ದಿಗ್ಗಜ ಸರ್ ಡಾನ್ ಬ್ರಾಡ್ಮನ್ (ಎರಡು ಬಾರಿ), ಗ್ರೆಗ್ ಚಾಪೆಲ್, ಸರ್ ಗಾರ್ಫೀಲ್ಡ್ ಸೋಬರ್ಸ್, ಸುನಿಲ್ ಗವಾಸ್ಕರ್, ಡೇವಿಡ್ ಗೋವರ್, ಗ್ರಹಾಂ ಗೂಚ್ ಮತ್ತು ಗ್ರೇಮ್ ಸ್ಮಿತ್ ಈ ಸಾಧನೆ ಮಾಡಿದ್ದಾರೆ.

5 / 6
ಇಷ್ಟೇ ಅಲ್ಲ, ಗವಾಸ್ಕರ್ ಮತ್ತು ಯಶಸ್ವಿ ಜೈಸ್ವಾಲ್ ನಂತರ ಟೆಸ್ಟ್ ಸರಣಿಯಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಗಿಲ್. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗವಾಸ್ಕರ್ ಅವರ ತವರು ನೆಲದಲ್ಲಿ 774 ರನ್ ಬಾರಿಸಿದ್ದರು.

6 / 6
ಆ ಬಳಿಕ 1778-79 ರಲ್ಲಿ ಭಾರತದಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಯಲ್ಲಿ ಎರಡನೇ ಬಾರಿಗೆ ಗವಾಸ್ಕರ್ 732 ರನ್ ಗಳಿಸಿದ್ದರು. 2024 ರಲ್ಲಿ ಯಶಸ್ವಿ ಜೈಸ್ವಾಲ್ ಕೂಡ ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧ 712 ರನ್ ಬಾರಿಸಿದ್ದರು. ಇದೀಗ ಗಿಲ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.