AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಸರಣಿ ನಂತರ ಹೊಸ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲಿರುವ ಶುಭ್​ಮನ್ ಗಿಲ್

Shubman Gill Joins Share-e-Punjab T20 League: ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ನಂತರ ಪಂಜಾಬ್‌ನ ಹೊಸ ಶೇರ್-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಆಡಲು ನಿರ್ಧರಿಸಿದ್ದಾರೆ. ಆಗಸ್ಟ್ 30ಕ್ಕೆ ಆರಂಭವಾಗುವ ಈ ಲೀಗ್‌ನಲ್ಲಿ ಅರ್ಷದೀಪ್ ಸಿಂಗ್ ಮತ್ತು ಅಭಿಷೇಕ್ ಶರ್ಮಾ ಕೂಡ ಭಾಗವಹಿಸಲಿದ್ದಾರೆ. ಯುವ ಪ್ರತಿಭೆಗಳಿಗೆ ವೇದಿಕೆ ಎಂದು ಗಿಲ್ ಅಭಿಪ್ರಾಯಪಟ್ಟಿದ್ದಾರೆ. ಒಟ್ಟು ಆರು ತಂಡಗಳಿದ್ದು, ಆಗಸ್ಟ್ 9ರಂದು ಹರಾಜು ನಡೆಯಲಿದೆ.

ಪೃಥ್ವಿಶಂಕರ
|

Updated on: Aug 03, 2026 | 7:04 PM

Share
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು ಆಡಿ ಮುಗಿಸಿದ ಬಳಿಕ ಟೀಂ ಇಂಡಿಯಾ ಪ್ರಸ್ತುತ ಯಾವುದೇ ಸರಣಿಯನ್ನು ಆಡುತ್ತಿಲ್ಲ. ತಂಡದ ಮುಂದಿನ ಸರಣಿ ಶ್ರೀಲಂಕಾ ವಿರುದ್ಧ ಇದೆ. ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದ್ದು, ನಾಯಕ ಶುಭ್​ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ(PC-PTI).

1 / 6
ಈ ಪ್ರವಾಸ ಮುಗಿದ ಬಳಿಕ ಶುಭ್​ಮನ್ ಗಿಲ್ ಮತ್ತೆ ಕಣಕ್ಕಿಳಿಯುವುದು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ. ಈ ಸರಣಿ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ. ಅಲ್ಲಿಯವರೆಗೂ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ತಮ್ಮ ಲಯವನ್ನು ಹಾಗೆಯೇ ಕಾಪಾಡಿಕೊಳ್ಳಲು ಟಿ20 ಲೀಗ್​ನಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ(PC-PTI).

2 / 6
ಪ್ರಾರಂಭಿಸಲಾಗುತ್ತಿದೆ. ಭಾರತದ ಶ್ರೀಲಂಕಾ ಪ್ರವಾಸ ಮುಗಿದ ಎರಡು ದಿನಗಳ ನಂತರ ಅಂದರೆ ಆಗಸ್ಟ್ 30 ರಿಂದ ಈ ಪಂದ್ಯಾವಳಿ ಆರಂಭವಾಗಲಿದೆ. ಶುಭಮನ್ ಗಿಲ್ ಮತ್ತು ಗುರ್ನೂರ್ ಬ್ರಾರ್ ತಮ್ಮ ರಾಷ್ಟ್ರೀಯ ತಂಡದ ಕರ್ತವ್ಯಗಳನ್ನು ಪೂರ್ಣಗೊಳಿಸಿದ ನಂತರ ಈ ಲೀಗ್​ನಲ್ಲಿ ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳಲಿದ್ದಾರೆ(PC-PTI).

3 / 6
ಈ ಇಬ್ಬರ ಜೊತೆಗೆ, ಭಾರತೀಯ ಟಿ20 ತಂಡದ ಭಾಗವಾಗಿರುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಮತ್ತು ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೂಡ ಸೆಪ್ಟೆಂಬರ್ 13 ರಂದು ಮುಕ್ತಾಯಗೊಳ್ಳುವ ಈ ಪಂದ್ಯಾವಳಿಯಲ್ಲಿ ಆಡುವ ನಿರೀಕ್ಷೆಯಿದೆ(PC-PTI).

4 / 6
ಶೇರ್-ಎ-ಪಂಜಾಬ್ ಟಿ20 ಲೀಗ್‌ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಿಲ್, ‘ಶೇರ್-ಎ-ಪಂಜಾಬ್ ಟಿ20 ಲೀಗ್ ಯುವ ಕ್ರಿಕೆಟಿಗರಿಗೆ ಪಂಜಾಬ್ ಮತ್ತು ಭಾರತಕ್ಕಾಗಿ ಆಡುವತ್ತ ತಮ್ಮ ಪ್ರತಿಭೆ ಮತ್ತು ಪ್ರಗತಿಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಪಂಜಾಬ್ ಯಾವಾಗಲೂ ಅತ್ಯುತ್ತಮ ಕ್ರಿಕೆಟಿಗರನ್ನು ಉತ್ಪಾದಿಸಿದೆ, ಮತ್ತು ಈ ಲೀಗ್ ಇನ್ನೂ ಅನೇಕರನ್ನು ಅನ್ವೇಷಿಸಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ’ ಎಂದಿದ್ದಾರೆ(PC-PTI).

5 / 6
ಈ ಟಿ20 ಲೀಗ್​ನ ಮೆಗಾ ಹರಾಜು ಆಗಸ್ಟ್ 9 ರಂದು ನಡೆಯಲಿದೆ. ಒಟ್ಟು ಆರು ತಂಡಗಳು ಭಾಗವಹಿಸುವ ಈ ಲೀಗ್​ನಲ್ಲಿ 27 ಪಂದ್ಯಗಳು ನಡೆಯಲಿವೆ. ಪಂದ್ಯಾವಳಿಯನ್ನು ರೌಂಡ್-ರಾಬಿನ್ ಸ್ವರೂಪದಲ್ಲಿ ಆಡಲಾಗುತ್ತದೆ. ಪ್ರತಿ ಫ್ರಾಂಚೈಸಿಯು ಒಬ್ಬ ಮಾರ್ಕ್ಯೂ ಆಟಗಾರ ಮತ್ತು ಕನಿಷ್ಠ ಇಬ್ಬರು ಐಕಾನ್ ಆಟಗಾರರನ್ನು ಹೊಂದಿರುತ್ತದೆ(PC-PTI).

6 / 6
Follow Us
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್

ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ

ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್

100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ

ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?

11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ

ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು

‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ

ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್