- Kannada News Photo gallery Cricket photos Shubman Gill becomes the leading runs scorer for India in WTC History
ಶಾನ್ದಾರ್ ಶತಕದೊಂದಿಗೆ ಭರ್ಜರಿ ದಾಖಲೆ ಬರೆದ ಶುಭ್ಮನ್ ಗಿಲ್
Shubman Gill Century: ಟೆಸ್ಟ್ ಕ್ರಿಕೆಟ್ನಲ್ಲಿ ಶುಭ್ಮನ್ ಗಿಲ್ ಪರಾಕ್ರಮ ಮುಂದುವರೆದಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಆಕರ್ಷಕ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
Updated on: Oct 11, 2025 | 12:51 PM

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಶುಭ್ಮನ್ ಗಿಲ್ (Shubman Gill) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್ಮನ್ ಗಿಲ್ 176 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ ಶತಕ ಪೂರೈಸಿದರು. ಈ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೆಸರಿನಲ್ಲಿತ್ತು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ 38 ಪಂದ್ಯಗಳನ್ನಾಡಿರುವ ಪಂತ್ 67 ಇನಿಂಗ್ಸ್ಗಳ ಮೂಲಕ ಒಟ್ಟು 2731 ರನ್ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ರನ್ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಶುಭ್ಮನ್ ಗಿಲ್ ಮುರಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯ್ಶಿಪ್ ಸರಣಿಯಲ್ಲಿ ಈವರೆಗೆ 39 ಪಂದ್ಯಗಳನ್ನಾಡಿರುವ ಗಿಲ್ 71 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 10 ಶತಕಗಳೊಂದಿಗೆ ಒಟ್ಟು 2796* ರನ್ ಕಲೆಹಾಕಿದ್ದಾರೆ.

ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ನ ಜೋ ರೂಟ್. WTC ನಲ್ಲಿ 69 ಪಂದ್ಯಗಳನ್ನಾಡಿರುವ ರೂಟ್ ಒಟ್ಟು 6080 ರನ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
