AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾನ್​ದಾರ್ ಶತಕದೊಂದಿಗೆ ಭರ್ಜರಿ ದಾಖಲೆ ಬರೆದ ಶುಭ್​ಮನ್ ಗಿಲ್

Shubman Gill Century: ಟೆಸ್ಟ್ ಕ್ರಿಕೆಟ್​ನಲ್ಲಿ ಶುಭ್​ಮನ್ ಗಿಲ್ ಪರಾಕ್ರಮ ಮುಂದುವರೆದಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ ಆಕರ್ಷಕ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 11, 2025 | 12:51 PM

Share
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶುಭ್​​ಮನ್ ಗಿಲ್ (Shubman Gill) ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 5
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​​ಮನ್ ಗಿಲ್ 176 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಶತಕ ಪೂರೈಸಿದರು. ಈ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೆಸರಿನಲ್ಲಿತ್ತು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ 38 ಪಂದ್ಯಗಳನ್ನಾಡಿರುವ ಪಂತ್ 67 ಇನಿಂಗ್ಸ್​ಗಳ ಮೂಲಕ ಒಟ್ಟು 2731 ರನ್​ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಶುಭ್​ಮನ್ ಗಿಲ್ ಮುರಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯ್​ಶಿಪ್ ಸರಣಿಯಲ್ಲಿ ಈವರೆಗೆ 39 ಪಂದ್ಯಗಳನ್ನಾಡಿರುವ ಗಿಲ್ 71 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 10 ಶತಕಗಳೊಂದಿಗೆ ಒಟ್ಟು 2796* ರನ್ ಕಲೆಹಾಕಿದ್ದಾರೆ.

4 / 5
ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಅತೀ ಹೆಚ್ಚು ರನ್​ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಜೋ ರೂಟ್. WTC ನಲ್ಲಿ 69 ಪಂದ್ಯಗಳನ್ನಾಡಿರುವ ರೂಟ್ ಒಟ್ಟು 6080 ರನ್​ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು

'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ

‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್

ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ

ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು

ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ