Shubman Gill: ಸ್ಪೋಟಕ ಡಬಲ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಶುಭ್ಮನ್ ಗಿಲ್
TV9 Web | Updated By: ಝಾಹಿರ್ ಯೂಸುಫ್
Updated on:
Jan 18, 2023 | 9:58 PM
Shubman Gill Records: ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್ನೊಂದಿಗೆ 208 ರನ್ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 10ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
1 / 6
ಟೀಮ್ ಇಂಡಿಯಾದ ಯುವ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಭರ್ಜರಿ ದ್ವಿಶತಕ ಸಿಡಿಸಿ ಇದೀಗ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಆಟಗಾರನ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದೇ ಇಲ್ಲಿ ವಿಶೇಷ.
2 / 6
ಹೌದು, ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಇಶಾನ್ ಕಿಶನ್ ಹೆಸರಿನಲ್ಲಿತ್ತು. ಕಿಶನ್ ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಡಬಲ್ ಸೆಂಚುರಿ ಸಿಡಿಸಿದಾಗ ಅವರ ವಯಸ್ಸು 24 ವರ್ಷ 145 ದಿನಗಳು. ಇದೀಗ ಈ ದಾಖಲೆಯನ್ನು ಶುಭ್ಮನ್ ಗಿಲ್ ಮುರಿದಿದ್ದಾರೆ.
3 / 6
ಹೈದರಾಬಾದ್ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್ಮನ್ ಗಿಲ್ 145 ಎಸೆತಗಳಲ್ಲಿ ದ್ವಿಶತಕ ಪೂರೈಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಡಬಲ್ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆ ಗಿಲ್ ಪಾಲಾಗಿದೆ.
4 / 6
ಶುಭ್ಮನ್ ಗಿಲ್ ತಮ್ಮ 23ನೇ ವಯಸ್ಸಿನಲ್ಲಿ (23 ವರ್ಷ/132 ದಿನಗಳು) ಈ ಸಾಧನೆ ಮಾಡಿದ್ದು, ಈ ಮೂಲಕ ಇಶಾನ್ ಕಿಶನ್ ಕೆಲ ತಿಂಗಳ ಹಿಂದೆ ಬರೆದಿದ್ದ ವಿಶ್ವ ದಾಖಲೆಯನ್ನು ಶುಭ್ಮನ್ ಗಿಲ್ ಮುರಿದರು.
5 / 6
ಇನ್ನು ಈ ಪಂದ್ಯದಲ್ಲಿ 149 ಎಸೆತಗಳನ್ನು ಎದುರಿಸಿದ ಶುಭ್ಮನ್ ಗಿಲ್ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್ನೊಂದಿಗೆ 208 ರನ್ ಬಾರಿಸಿದರು. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ ವಿಶ್ವದ 10ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
6 / 6
ಹಾಗೆಯೇ ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ ಭಾರತದ 5ನೇ ಬ್ಯಾಟ್ಸ್ಮನ್ ಎಂಬ ಹಿರಿಮೆಗೂ ಶುಭ್ಮನ್ ಗಿಲ್ ಪಾತ್ರರಾದರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಈ ಸಾಧನೆ ಮಾಡಿದ್ದರು.