Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್

TV9kannada Web Team

TV9kannada Web Team | Edited By: Zahir PY

Updated on: Jan 25, 2023 | 10:57 PM

Shubman Gill Records: ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳಲ್ಲಿ 1 ದ್ವಿಶತಕ ಹಾಗೂ ಶತಕದೊಂದಿಗೆ ಶುಭ್​ಮನ್ ಗಿಲ್ ಒಟ್ಟು 360 ರನ್​ ಬಾರಿಸಿದ್ದಾರೆ.

Jan 25, 2023 | 10:57 PM
ಇಂದೋರ್​ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಶುಭ್​ಮನ್ ಗಿಲ್ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ರೆಕಾರ್ಡ್​ ಮುರಿದು ಎಂಬುದೇ ವಿಶೇಷ.

1 / 7
ಈ ಪಂದ್ಯದಲ್ಲಿ 78 ಎಸೆತಗಳನ್ನು ಎದುರಿಸಿದ್ದ ಶುಭ್​ಮನ್ ಗಿಲ್ 5 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ನೊಂದಿಗೆ 112 ರನ್​ ಬಾರಿಸಿದ್ದರು. ಇದಕ್ಕೂ ಮುನ್ನ 2ನೇ ಏಕದಿನ ಪಂದ್ಯದಲ್ಲಿ ಅಜೇಯ 40 ರನ್​ ಹಾಗೂ ಮೊದಲ ಏಕದಿನ ಪಂದ್ಯದಲ್ಲಿ 208 ರನ್​ಗಳ ಸಿಡಿಲಬ್ಬರದ ದ್ವಿಶತಕ ಸಿಡಿಸಿದ್ದರು.

2 / 7
ಇದರೊಂದಿಗೆ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಶುಭ್​ಮನ್ ಗಿಲ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

3 / 7
ಕಿಂಗ್ ಕೊಹ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಒಟ್ಟು 283 ರನ್​ ಬಾರಿಸಿದ್ದರು. ಇದು 3 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಭಾರತೀಯ ಆಟಗಾರನೊಬ್ಬ ಕಲೆಹಾಕಿದ ಅತ್ಯಧಿಕ ರನ್ ಆಗಿತ್ತು.

4 / 7
ಇದೀಗ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳಲ್ಲಿ 1 ದ್ವಿಶತಕ ಹಾಗೂ ಶತಕದೊಂದಿಗೆ ಶುಭ್​ಮನ್ ಗಿಲ್ ಒಟ್ಟು 360 ರನ್​ ಬಾರಿಸಿದ್ದಾರೆ. ಈ ಮೂಲಕ ಕಿಂಗ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿ ಗಿಲ್ ಹೊರ ರೆಕಾರ್ಡ್ ನಿರ್ಮಿಸಿದ್ದಾರೆ.

5 / 7
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 1000 ರನ್​ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನು ಗಿಲ್ ಮುರಿದಿದ್ದರು. ಕೊಹ್ಲಿ 24 ಇನಿಂಗ್ಸ್​ ಮೂಲಕ ಈ ಸಾಧನೆ ಮಾಡಿದ್ದರು.

6 / 7
ಆದರೆ ಕೇವಲ ಕೇವಲ 19 ಇನಿಂಗ್ಸ್​ ಮೂಲಕ ಶುಭ್​ಮನ್ ಗಿಲ್ ಸಾವಿರ ರನ್ ಪೂರೈಸಿ ಹೊಸ ದಾಖಲೆ ನಿರ್ಮಿಸಿದ್ದರು. ಅಂದರೆ ಕಿಂಗ್ ಕೊಹ್ಲಿಗಿಂತ 5 ಇನಿಂಗ್ಸ್​ ಕಡಿಮೆ ಅವಧಿಯಲ್ಲಿ ಗಿಲ್ ಈ ಸಾಧನೆ ಮಾಡಿದ್ದಾರೆ. ಇದೀಗ 3 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ.

7 / 7

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada