AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಕ ಸಿಡಿಸಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಶುಭ್​ಮನ್ ಗಿಲ್

Shubman Gill: ಟೆಸ್ಟ್ ಕ್ರಿಕೆಟ್​ನಲ್ಲಿ ಶುಭ್​ಮನ್ ಗಿಲ್ ಮತ್ತೊಂದು ಶತಕ ಸಿಡಿಸಿದ್ದಾರೆ. ಈವರೆಗೆ 48 ಟೆಸ್ಟ್ ಇನಿಂಗ್ಸ್ ಆಡಿರುವ ಗಿಲ್ 6 ಅರ್ಧಶತಕ ಹಾಗೂ 5 ಭರ್ಜರಿ ಶತಕಗಳೊಂದಿಗೆ 1500 ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಕೊಹ್ಲಿ ನಿರ್ಮಿಸಿದ್ದ ವಿಶೇಷ ದಾಖಲೆಯನ್ನು ಸಹ ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 21, 2024 | 1:15 PM

Share
ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 161 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

1 / 5
ಇದಕ್ಕೂ ಮುನ್ನ ದ್ವಿತೀಯ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಯಲ್ಲಿ ಒಟ್ಟು 62 ಇನಿಂಗ್ಸ್ ಆಡಿರುವ ಕೊಹ್ಲಿ 4 ಶತಕ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ 5ನೇ ಶತಕದೊಂದಿಗೆ ಶುಭ್​ಮನ್​ ಗಿಲ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

2 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 48 ಇನಿಂಗ್ಸ್ ಆಡಿರುವ ಶುಭ್​​ಮನ್ ಗಿಲ್ 5 ಶತಕ ಸಿಡಿಸಿದ್ದಾರೆ. ಈ ಮೂಲಕ ಡಬ್ಲ್ಯೂಟಿಸಿ ಸರಣಿಯಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 56 ಇನಿಂಗ್ಸ್​ ಆಡಿರುವ ಹಿಟ್​ಮ್ಯಾನ್ ಒಟ್ಟು 9 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ WTC ಇತಿಹಾಸದಲ್ಲಿ ಅತೀ ಹೆಚ್ಚು ಸೆಂಚುರಿ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

4 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಇಂಗ್ಲೆಂಡ್​ನ ಜೋ ರೂಟ್ ಹೆಸರಿನಲ್ಲಿದೆ. WTC ಸರಣಿಯಲ್ಲಿ 106 ಇನಿಂಗ್ಸ್​ ಆಡಿರುವ ರೂಟ್ 16 ಶತಕಗಳೊಂದಿಗೆ ಒಟ್ಟು 4973 ರನ್ ಕಲೆಹಾಕಿದ್ದಾರೆ. ಈ ಮೂಲಕ ಶತಕದ ದಾಖಲೆಯೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್