- Kannada News Photo gallery Cricket photos IND vs BAN: Shubman Gill Breaks Virat Kohli's Century Record in WTC
ಶತಕ ಸಿಡಿಸಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಶುಭ್ಮನ್ ಗಿಲ್
Shubman Gill: ಟೆಸ್ಟ್ ಕ್ರಿಕೆಟ್ನಲ್ಲಿ ಶುಭ್ಮನ್ ಗಿಲ್ ಮತ್ತೊಂದು ಶತಕ ಸಿಡಿಸಿದ್ದಾರೆ. ಈವರೆಗೆ 48 ಟೆಸ್ಟ್ ಇನಿಂಗ್ಸ್ ಆಡಿರುವ ಗಿಲ್ 6 ಅರ್ಧಶತಕ ಹಾಗೂ 5 ಭರ್ಜರಿ ಶತಕಗಳೊಂದಿಗೆ 1500 ಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಕೊಹ್ಲಿ ನಿರ್ಮಿಸಿದ್ದ ವಿಶೇಷ ದಾಖಲೆಯನ್ನು ಸಹ ಮುರಿದಿದ್ದಾರೆ.
Updated on: Sep 21, 2024 | 1:15 PM

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 161 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ದ್ವಿತೀಯ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಒಟ್ಟು 62 ಇನಿಂಗ್ಸ್ ಆಡಿರುವ ಕೊಹ್ಲಿ 4 ಶತಕ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ 5ನೇ ಶತಕದೊಂದಿಗೆ ಶುಭ್ಮನ್ ಗಿಲ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಈವರೆಗೆ 48 ಇನಿಂಗ್ಸ್ ಆಡಿರುವ ಶುಭ್ಮನ್ ಗಿಲ್ 5 ಶತಕ ಸಿಡಿಸಿದ್ದಾರೆ. ಈ ಮೂಲಕ ಡಬ್ಲ್ಯೂಟಿಸಿ ಸರಣಿಯಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 56 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಒಟ್ಟು 9 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ WTC ಇತಿಹಾಸದಲ್ಲಿ ಅತೀ ಹೆಚ್ಚು ಸೆಂಚುರಿ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಇಂಗ್ಲೆಂಡ್ನ ಜೋ ರೂಟ್ ಹೆಸರಿನಲ್ಲಿದೆ. WTC ಸರಣಿಯಲ್ಲಿ 106 ಇನಿಂಗ್ಸ್ ಆಡಿರುವ ರೂಟ್ 16 ಶತಕಗಳೊಂದಿಗೆ ಒಟ್ಟು 4973 ರನ್ ಕಲೆಹಾಕಿದ್ದಾರೆ. ಈ ಮೂಲಕ ಶತಕದ ದಾಖಲೆಯೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.




