Updated on: Feb 01, 2023 | 10:11 PM
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್ಮನ್ ಗಿಲ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಆರಂಭದಿಂದಲೇ ಸ್ಪೋಟಕ ಇನಿಂಗ್ಸ್ ಆಡಿದ ಶುಭ್ಮನ್ ಕೇವಲ 54 ಎಸೆತಗಳಲ್ಲಿ ಶತಕ ಪೂರೈಸಿದರು.
ಶತಕದ ಬಳಿಕ ಅಬ್ಬರ ಮುಂದುವರೆಸಿದ ಗಿಲ್ 63 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 12 ಫೋರ್ನೊಂದಿಗೆ ಅಜೇಯ 126 ರನ್ ಬಾರಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಶುಭ್ಮನ್ ಗಿಲ್ ಪಾಲಾಯಿತು.
ಹೌದು, ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸ್ಕೋರ್ಗಳಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2022ರ ಏಷ್ಯಾಕಪ್ನಲ್ಲಿ ಅಫ್ಘಾನಿಸ್ತಾನ್ ವಿರುದ್ಧ 122 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದು ಟಿ20 ಕ್ರಿಕೆಟ್ನಲ್ಲಿ ಭಾರತೀಯ ಆಟಗಾರ ಕಲೆಹಾಕಿದ ಅತ್ಯಧಿಕ ಸ್ಕೋರ್ ಆಗಿತ್ತು.
ಇದೀಗ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಶುಭ್ಮನ್ ಗಿಲ್ 126 ರನ್ ಕಲೆಹಾಕಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ದಾಖಲೆಯು ಶುಭ್ಮನ್ ಗಿಲ್ ಪಾಲಾಗಿದೆ.
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 1000 ರನ್ ಪೂರೈಸಿದ ವಿರಾಟ್ ಕೊಹ್ಲಿಯ ದಾಖಲೆಯನ್ನು ಶುಭ್ಮನ್ ಗಿಲ್ ಮುರಿದಿದ್ದರು. ಕಿಂಗ್ ಕೊಹ್ಲಿ 24 ಇನಿಂಗ್ಸ್ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಸಾವಿರ ರನ್ ಪೂರೈಸಿದ್ದರು.
ಆದರೆ ಗಿಲ್ ಕೇವಲ 19 ಇನಿಂಗ್ಸ್ ಮೂಲಕ ಏಕದಿನ ಕ್ರಿಕೆಟ್ನಲ್ಲಿ 1000 ರನ್ ಕಲೆಹಾಕುವ ಮೂಲಕ ಕಿಂಗ್ ಕೊಹ್ಲಿಯ ದಾಖಲೆಯನ್ನು ಅಳಿಸಿಹಾಕಿದ್ದರು. ಇದೀಗ ಟಿ20 ಕ್ರಿಕೆಟ್ನಲ್ಲೂ ಅತ್ಯಧಿಕ ರನ್ ಬಾರಿಸಿ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಶುಭ್ಮನ್ ಗಿಲ್ ಮುರಿದಿರುವುದು ವಿಶೇಷ.