Shubman Gill Century: ಈ ಪಂದ್ಯದಲ್ಲಿ 92 ಎಸೆತಗಳನ್ನು ಎದುರಿಸಿದ ಗಿಲ್ 6 ಫೋರ್ 4 ಸಿಕ್ಸ್ಗಳೊಂದಿಗೆ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 35 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಶುಭ್ಮನ್ ಗಿಲ್ ತಮ್ಮದಾಗಿಸಿಕೊಂಡರು.
ಇಂದೋರ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್ಮನ್ ಗಿಲ್ (104) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.
1 / 6
ಈ ಪಂದ್ಯದಲ್ಲಿ 92 ಎಸೆತಗಳನ್ನು ಎದುರಿಸಿದ ಗಿಲ್ 6 ಫೋರ್ 4 ಸಿಕ್ಸ್ಗಳೊಂದಿಗೆ ಶತಕ ಪೂರೈಸಿದರು. ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್ನಲ್ಲಿ 35 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಶುಭ್ಮನ್ ಗಿಲ್ ತಮ್ಮದಾಗಿಸಿಕೊಂಡರು.
2 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾ ಹಾಶಿಮ್ ಆಮ್ಲ ಹೆಸರಿನಲ್ಲಿತ್ತು. ಮೊದಲ 35 ಏಕದಿನ ಇನಿಂಗ್ಸ್ಗಳಲ್ಲಿ ಆಮ್ಲ 1844 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು.
3 / 6
ಇದೀಗ 35 ಏಕದಿನ ಇನಿಂಗ್ಸ್ಗಳಲ್ಲಿ 1900+ ರನ್ ಕಲೆಹಾಕುವ ಮೂಲಕ ಶುಭ್ಮನ್ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಮೊದಲ 35 ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
4 / 6
ಇನ್ನು ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 105 ರನ್ ಬಾರಿಸಿದ್ದರು. ಅಷ್ಟೇ ಅಲ್ಲದೆ ಶುಭ್ಮನ್ ಗಿಲ್ ಜೊತೆಗೂಡಿ 2ನೇ ವಿಕೆಟ್ಗೆ 200 ರನ್ಗಳ ಜೊತೆಯಾಟವಾಡಿದರು. ಈ ಮೂಲಕ ಇಂದೋರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ 2ನೇ ವಿಕೆಟ್ಗೆ ಅತ್ಯಧಿಕ ರನ್ ಪೇರಿಸಿದ ಜೋಡಿ ಎಂಬ ಹೆಗ್ಗಳಿಕೆಗೆ ಶ್ರೇಯಸ್ ಅಯ್ಯರ್-ಶುಭ್ಮನ್ ಗಿಲ್ ಪಾತ್ರರಾದರು.
5 / 6
ಹಾಗೆಯೇ ಈ ವರ್ಷ ಅತ್ಯಧಿಕ ಅಂತರರಾಷ್ಟ್ರೀಯ ಶತಕ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ಶುಭ್ಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ. ಗಿಲ್ ಇದುವರೆಗೆ ಒಟ್ಟು 7 ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ.