AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2025-27: ಜೋ ರೂಟ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಶುಭ್​ಮನ್ ಗಿಲ್

Shubman Gill century: ಶುಭ್​ಮನ್ ಗಿಲ್ ಅಫ್ಘಾನಿಸ್ತಾನ ವಿರುದ್ಧ ಶತಕ ಸಿಡಿಸಿ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025-27ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು. ತಮ್ಮ 12ನೇ ಟೆಸ್ಟ್ ಶತಕ ದಾಖಲಿಸಿ ಜೋ ರೂಟ್ ಅವರನ್ನು ಹಿಂದಿಕ್ಕಿದ ಗಿಲ್, ಅಫ್ಘನ್ ವಿರುದ್ಧ ಭಾರತದ ಪರ ಗರಿಷ್ಠ ವೈಯಕ್ತಿಕ ರನ್ ಗಳಿಸಿದ ದಾಖಲೆಯನ್ನೂ ಬರೆದರು. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ 20ನೇ ಶತಕವಾಗಿದ್ದು, ಗೌತಮ್ ಗಂಭೀರ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Jun 07, 2026 | 3:36 PM

Share
ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಶತಕ ಸಿಡಿಸಿ ಮಿಂಚಿದರು. ತಮ್ಮ ಟೆಸ್ಟ್ ವೃತ್ತಿಜೀವನದ 12ನೇ ಶತಕವನ್ನು ದಾಖಲಿಸಿದ ಗಿಲ್, ಈ ಶತಕದ ಇನ್ನಿಂಗ್ಸ್ ಮೂಲಕ 2025-27 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ (PC- PTI).

1 / 5
2025-27 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ ಎಂಟು ಪಂದ್ಯಗಳನ್ನಾಡಿರುವ ಗಿಲ್ 14 ಇನ್ನಿಂಗ್ಸ್‌ಗಳಲ್ಲಿ 950 ರನ್ ಗಳಿಸಿದ್ದಾರೆ, ಇದರಲ್ಲಿ ಐದು ಶತಕಗಳು ಮತ್ತು ಅರ್ಧಶತಕವೂ ಸೇರಿದೆ. ಇದೀಗ ಅಫ್ಘನ್ ವಿರುದ್ಧ ಮೊದಲ ಇನ್ನಿಂಗ್ಸ್​ನಲ್ಲಿ 126ರನ್ ಬಾರಿಸಿದ ಗಿಲ್, ಜೋ ರೂಟ್ ಅವರನ್ನು ಹಿಂದಿಕ್ಕಿ ಡಬ್ಲ್ಯೂಟಿಸಿ 2025-27 ರ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ (PC- PTI).

2 / 5
ಇದೀಗ ಎರಡನೇ ಸ್ಥಾನಕ್ಕೆ ಕುಸಿದಿರುವ ಇಂಗ್ಲೆಂಡ್ ತಂಡದ ಅನುಭವಿ ಆಟಗಾರ ಜೋ ರೂಟ್ ಈ ಆವೃತ್ತಿಯಲ್ಲಿ ಆಡಿರುವ 11 ಪಂದ್ಯಗಳ 21 ಇನ್ನಿಂಗ್ಸ್‌ಗಳಲ್ಲಿ 946 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಶತಕ ಮತ್ತು ಒಂದು ಅರ್ಧಶತಕವೂ ಸೇರಿದೆ. ಇದರಲ್ಲಿ ರೂಟ್ ಅವರ ಅತ್ಯುತ್ತಮ ಸ್ಕೋರ್ 160 ರನ್ ಆಗಿದೆ (PC- PTI).

3 / 5
ಇದರ ಜೊತೆಗೆ ಗಿಲ್ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವೈಯಕ್ತಿಕ ರನ್ ದಾಖಲಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ತಂಡದ ವಿರುದ್ಧ ಟೆಸ್ಟ್ ಇನ್ನಿಂಗ್ಸ್‌ವೊಂದರನ್ನು ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಗಿಲ್ ಐದನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವ ಜಿಂಬಾಬ್ವೆಯ ಸೀನ್ ವಿಲಿಯಮ್ಸ್ 2024 ರಲ್ಲಿ 154 ರನ್​ಗಳ ಇನ್ನಿಂಗ್ಸ್ ಆಡಿದ್ದರು (PC- PTI).

4 / 5
ಅಫ್ಘನ್ ವಿರುದ್ಧ ಬಾರಿಸಿದ ಶತಕದೊಂದಿಗೆ, ಶುಭ್​ಮನ್ ಗಿಲ್ ಈಗ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಗೌತಮ್ ಗಂಭೀರ್ ಕೂಡ ತಮ್ಮ ವೃತ್ತಿಜೀವನದಲ್ಲಿ 20 ಶತಕಗಳನ್ನು ಬಾರಿಸಿದ್ದರು (PC- PTI).

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us