AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಟಾಪ್ 10 ರೊಳಗೆ ಇಬ್ಬರು ಭಾರತೀಯರು; ಅಗ್ರಸ್ಥಾನದಲ್ಲಿ ಉಳಿದ ಬುಮ್ರಾ

ICC Test Rankings: ಐಸಿಸಿ ಬಿಡುಗಡೆ ಮಾಡಿದ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಶುಭ್​ಮನ್ ಗಿಲ್ 8ನೇ ಸ್ಥಾನಕ್ಕೆ ಏರಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಶತಕದ ನೆರವಿನಿಂದ ಗಿಲ್ ಟಾಪ್ 10 ಪ್ರವೇಶಿಸಿದ್ದಾರೆ. ಯಶಸ್ವಿ ಜೈಸ್ವಾಲ್ 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ಜಸ್ಪ್ರೀತ್ ಬುಮ್ರಾ ನಂ.1 ಟೆಸ್ಟ್ ಬೌಲರ್ ಆಗಿ ಮುಂದುವರಿದಿದ್ದಾರೆ. ರಿಷಭ್ ಪಂತ್ 12ನೇ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ 34ನೇ ಸ್ಥಾನದಲ್ಲಿದ್ದಾರೆ. ಹ್ಯಾರಿ ಬ್ರೂಕ್ ಟೆಸ್ಟ್ ಬ್ಯಾಟ್ಸ್‌ಮನ್ ನಂ.1 ಸ್ಥಾನಕ್ಕೇರಿದ್ದಾರೆ.

ಪೃಥ್ವಿಶಂಕರ
|

Updated on:Jun 10, 2026 | 5:12 PM

Share
ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮುಂಬಡ್ತಿ ಪಡೆದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 126 ರನ್​ಗಳ ಶತಕದ ಇನ್ನಿಂಗ್ಸ್ ಆಡಿದ್ದ ಗಿಲ್​​ಗೆ ಐಸಿಸಿ ರ್ಯಾಂಕಿಂಗ್​ನಲ್ಲಿ ಟಾಪ್ 10 ರೊಳಗೆ ಅಂದರೆ 8 ನೇ ಸ್ಥಾನ ಸಿಕ್ಕಿದೆ. ಈ ಮೊದಲು 10ನೇ ಸ್ಥಾನದಲ್ಲಿದ್ದ ಗಿಲ್, ಇದೀಗ ಇಬ್ಬರು ಆಟಗಾರನನ್ನು ಹಿಂದಿಕ್ಕಿದ್ದಾರೆ (PC-PTI).

1 / 5
ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ 743 ರೇಟಿಂಗ್ ಅಂಕಗಳನ್ನು ಹೊಂದಿರುವ ಶುಭ್​ಮನ್ ಗಿಲ್ 8 ನೇ ಸ್ಥಾನದಲ್ಲಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧ ಆರಂಭಿಕನಾಗಿ ಮಿಂಚುವಲ್ಲಿ ವಿಫಲರಾಗಿದ್ದ ಯಶಸ್ವಿ ಜೈಸ್ವಾಲ್‌ಗೆ ಹಿಂಬಡ್ತಿ ಸಿಕ್ಕಿದೆ. ಜೈಸ್ವಾಲ್ ಈಗ 8 ನೇ ಸ್ಥಾನದಿಂದ 9 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದಾಗ್ಯೂ ಗಿಲ್ ಮತ್ತು ಜೈಸ್ವಾಲ್​ರನ್ನು ಹೊರತುಪಡಿಸಿ ಭಾರತದ ಯಾವ ಆಟಗಾರನು ಟಾಪ್ 10 ರಲ್ಲಿ ಸ್ಥಾನ ಪಡೆದಿಲ್ಲ (PC-PTI).

2 / 5
ಮುಲ್ಲನ್‌ಪುರದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶುಭಮನ್ ಗಿಲ್ 177 ಎಸೆತಗಳಲ್ಲಿ 126 ರನ್ ಕಲೆಹಾಕಿದ್ದರು. ಇತ್ ಯಶಸ್ವಿ ಜೈಸ್ವಾಲ್ ಅವರ ಇನ್ನಿಂಗ್ಸ್ 24 ರನ್‌ಗಳಿಗೆ ಅಂತ್ಯವಾಗಿತ್ತು. ಇವರಿಬ್ಬರ ಹೊರತಾಗಿ ಕನ್ನಡಿಗ ಕೆಎಲ್ ರಾಹುಲ್ ಕೂಡ 165 ಎಸೆತಗಳಲ್ಲಿ 100 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಆದರೆ ಇದರ ಹೊರತಾಗಿಯೂ ಅವರ ಶ್ರೇಯಾಂಕ ಬದಲಾಗಲ್ಲ. ಪ್ರಸ್ತುತ ರಾಹುಲ್ ಹೊಸ ಶ್ರೇಯಾಂಕದಲ್ಲಿ 34 ನೇ ಸ್ಥಾನದಲ್ಲಿದ್ದಾರೆ (PC-PTI).

3 / 5
ಅಫ್ಘನ್ ವಿರುದ್ಧ 81 ರನ್​ಗಳ ಇನ್ನಿಂಗ್ಸ್ ಆಡಿದ್ದ ರಿಷಭ್ ಪಂತ್ ಒಂದು ಸ್ಥಾನ ಏರಿಕೆಯಾಗಿ ಈಗ 12 ನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಹ್ಯಾರಿ ಬ್ರೂಕ್, ಜೋ ರೂಟ್ ಅವರನ್ನು ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕೆ ತಲುಪಿದ್ದರೆ, ರೂಟ್ ಈಗ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ಆಡದಿದ್ದರೂ ಎರಡನೇ ಸ್ಥಾನದಲ್ಲಿದ್ದಾರೆ (PC-PTI).

4 / 5
ಹಾಗೆಯೇ ಟೆಸ್ಟ್ ಬೌಲರ್ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ 870 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಂ. 1 ಸ್ಥಾನದಲ್ಲೇ ಮುಂದುವರೆದಿದ್ದರೆ. ಮಿಚೆಲ್ ಸ್ಟಾರ್ಕ್ 838 ನೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ಬುಮ್ರಾ ಹೊರತುಪಡಿಸಿ ಬೇರೆ ಯಾವುದೇ ಭಾರತೀಯ ಬೌಲರ್ ಟಾಪ್ 10 ರಲ್ಲಿಲ್ಲ. ಈ ಹಿಂದೆ 15 ನೇ ಸ್ಥಾನದಲ್ಲಿದ್ದ ಕುಲ್ದೀಪ್ ಯಾದವ್ ಶ್ರೇಯಾಂಕದಲ್ಲಿ 14 ನೇ ಸ್ಥಾನಕ್ಕೆ ಏರಿದ್ದಾರೆ. ಪ್ಯಾಟ್ ಕಮ್ಮಿನ್ಸ್ 832 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ (PC-PTI).

5 / 5

Published On - 4:07 pm, Wed, 10 June 26

ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ