
ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಮುಂಬಡ್ತಿ ಪಡೆದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 126 ರನ್ಗಳ ಶತಕದ ಇನ್ನಿಂಗ್ಸ್ ಆಡಿದ್ದ ಗಿಲ್ಗೆ ಐಸಿಸಿ ರ್ಯಾಂಕಿಂಗ್ನಲ್ಲಿ ಟಾಪ್ 10 ರೊಳಗೆ ಅಂದರೆ 8 ನೇ ಸ್ಥಾನ ಸಿಕ್ಕಿದೆ. ಈ ಮೊದಲು 10ನೇ ಸ್ಥಾನದಲ್ಲಿದ್ದ ಗಿಲ್, ಇದೀಗ ಇಬ್ಬರು ಆಟಗಾರನನ್ನು ಹಿಂದಿಕ್ಕಿದ್ದಾರೆ (PC-PTI).

ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ 743 ರೇಟಿಂಗ್ ಅಂಕಗಳನ್ನು ಹೊಂದಿರುವ ಶುಭ್ಮನ್ ಗಿಲ್ 8 ನೇ ಸ್ಥಾನದಲ್ಲಿದ್ದಾರೆ. ಆದರೆ ಅಫ್ಘಾನಿಸ್ತಾನ ವಿರುದ್ಧ ಆರಂಭಿಕನಾಗಿ ಮಿಂಚುವಲ್ಲಿ ವಿಫಲರಾಗಿದ್ದ ಯಶಸ್ವಿ ಜೈಸ್ವಾಲ್‌ಗೆ ಹಿಂಬಡ್ತಿ ಸಿಕ್ಕಿದೆ. ಜೈಸ್ವಾಲ್ ಈಗ 8 ನೇ ಸ್ಥಾನದಿಂದ 9 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆದಾಗ್ಯೂ ಗಿಲ್ ಮತ್ತು ಜೈಸ್ವಾಲ್ರನ್ನು ಹೊರತುಪಡಿಸಿ ಭಾರತದ ಯಾವ ಆಟಗಾರನು ಟಾಪ್ 10 ರಲ್ಲಿ ಸ್ಥಾನ ಪಡೆದಿಲ್ಲ (PC-PTI).

ಮುಲ್ಲನ್‌ಪುರದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶುಭಮನ್ ಗಿಲ್ 177 ಎಸೆತಗಳಲ್ಲಿ 126 ರನ್ ಕಲೆಹಾಕಿದ್ದರು. ಇತ್ ಯಶಸ್ವಿ ಜೈಸ್ವಾಲ್ ಅವರ ಇನ್ನಿಂಗ್ಸ್ 24 ರನ್‌ಗಳಿಗೆ ಅಂತ್ಯವಾಗಿತ್ತು. ಇವರಿಬ್ಬರ ಹೊರತಾಗಿ ಕನ್ನಡಿಗ ಕೆಎಲ್ ರಾಹುಲ್ ಕೂಡ 165 ಎಸೆತಗಳಲ್ಲಿ 100 ರನ್ಗಳ ಇನ್ನಿಂಗ್ಸ್ ಆಡಿದ್ದರು. ಆದರೆ ಇದರ ಹೊರತಾಗಿಯೂ ಅವರ ಶ್ರೇಯಾಂಕ ಬದಲಾಗಲ್ಲ. ಪ್ರಸ್ತುತ ರಾಹುಲ್ ಹೊಸ ಶ್ರೇಯಾಂಕದಲ್ಲಿ 34 ನೇ ಸ್ಥಾನದಲ್ಲಿದ್ದಾರೆ (PC-PTI).

ಅಫ್ಘನ್ ವಿರುದ್ಧ 81 ರನ್ಗಳ ಇನ್ನಿಂಗ್ಸ್ ಆಡಿದ್ದ ರಿಷಭ್ ಪಂತ್ ಒಂದು ಸ್ಥಾನ ಏರಿಕೆಯಾಗಿ ಈಗ 12 ನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಹ್ಯಾರಿ ಬ್ರೂಕ್, ಜೋ ರೂಟ್ ಅವರನ್ನು ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕೆ ತಲುಪಿದ್ದರೆ, ರೂಟ್ ಈಗ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ಆಡದಿದ್ದರೂ ಎರಡನೇ ಸ್ಥಾನದಲ್ಲಿದ್ದಾರೆ (PC-PTI).

ಹಾಗೆಯೇ ಟೆಸ್ಟ್ ಬೌಲರ್ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ 870 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಂ. 1 ಸ್ಥಾನದಲ್ಲೇ ಮುಂದುವರೆದಿದ್ದರೆ. ಮಿಚೆಲ್ ಸ್ಟಾರ್ಕ್ 838 ನೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. ಬುಮ್ರಾ ಹೊರತುಪಡಿಸಿ ಬೇರೆ ಯಾವುದೇ ಭಾರತೀಯ ಬೌಲರ್ ಟಾಪ್ 10 ರಲ್ಲಿಲ್ಲ. ಈ ಹಿಂದೆ 15 ನೇ ಸ್ಥಾನದಲ್ಲಿದ್ದ ಕುಲ್ದೀಪ್ ಯಾದವ್ ಶ್ರೇಯಾಂಕದಲ್ಲಿ 14 ನೇ ಸ್ಥಾನಕ್ಕೆ ಏರಿದ್ದಾರೆ. ಪ್ಯಾಟ್ ಕಮ್ಮಿನ್ಸ್ 832 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ (PC-PTI).
Published On - 4:07 pm, Wed, 10 June 26