ಬರೋಬ್ಬರಿ 35 ವರ್ಷಗಳ ಬಳಿಕ ಆಂಗ್ಲರ ನಾಡಿನಲ್ಲಿ ಗಿಲ್ ಗಿಲ್ ಗಿಲಕ್
England vs India, 2nd Test: ಭಾರತ ತಂಡದ ಮೂವರು ನಾಯಕರುಗಳು ಮಾತ್ರ ಟೆಸ್ಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿಜಯ್ ಹಝಾರೆ (1951). ಆ ಬಳಿಕ ಈ ಸಾಧನೆಯನ್ನು ಮೊಹಮ್ಮದ್ ಅಝರುದ್ದೀನ್ ಸರಿಗಟ್ಟಿದ್ದರು. ಇದೀಗ ಶುಭ್ಮನ್ ಗಿಲ್ ಕೂಡ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲೂ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ (Shubman Gill) ಶತಕ ಸಿಡಿಸಿದ್ದಾರೆ. ಹೆಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 147 ರನ್ ಬಾರಿಸಿ ಮಿಂಚಿದ್ದ ಗಿಲ್, ಇದೀಗ ಎಡ್ಜ್ಬಾಸ್ಟನ್ ಮೈದಾನದಲ್ಲಿ ಅಜೇಯ 114 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
1 / 5
ಈ ಎರಡು ಶತಕಗಳೊಂದಿಗೆ ಶುಭ್ಮನ್ ಗಿಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಆಂಗ್ಲರನಾಡಿನಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ಕ್ಯಾಪ್ಟನ್ಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ಎಂಬುದು ವಿಶೇಷ. ಆದರೆ ಟೀಮ್ ಇಂಡಿಯಾದ ನಾಯಕನ ಬ್ಯಾಟ್ನಿಂದ ಈ ಸಾಧನೆ ಮೂಡಿಬಂದಿರುವುದು ಬರೋಬ್ಬರಿ 35 ವರ್ಷಗಳ ಬಳಿಕ ಎಂಬುದು ಇಲ್ಲಿ ಉಲ್ಲೇಖಾರ್ಹ.
2 / 5
ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಝರುದ್ದೀನ್ 1990 ರಲ್ಲಿ ಇಂಗ್ಲೆಂಡ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಲಾರ್ಡ್ಸ್ ಮೈದಾನದಲ್ಲಿ 121 ರನ್ ಬಾರಿಸಿದ್ದ ಅಝರ್, ಆ ಬಳಿಕ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ 179 ರನ್ಗಳ ಭರ್ಜರಿ ಇನಿಂಗ್ಸ್ ಆಡಿದ್ದರು.
3 / 5
ಇದೀಗ 35 ವರ್ಷಗಳ ಬಳಿಕ ಟೀಮ್ ಇಂಡಿಯಾ ನಾಯಕನೊಬ್ಬ ಇಂಗ್ಲೆಂಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಟೆಸ್ಟ್ ಸೆಂಚುರಿಗಳನ್ನು ಸಿಡಿಸಿದ್ದಾರೆ. ಹೆಡಿಂಗ್ಲೆಯಲ್ಲಿ 147 ರನ್ಗಳ ಇನಿಂಗ್ಸ್ ಆಡಿದ್ದ ಗಿಲ್ ಇದೀಗ ಎಡ್ಜ್ಬಾಸ್ಟನ್ನಲ್ಲಿ 110* ಬಾರಿಸಿದ್ದಾರೆ. ಈ ಮೂಲಕ ಅಝರ್ ಬಳಿಕ ಇಂಗ್ಲೆಂಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಟೆಸ್ಟ್ ಸೆಂಚುರಿ ಸಿಡಿಸಿದ ನಾಯಕ ಎನಿಸಿಕೊಂಡಿದ್ದಾರೆ.
4 / 5
ಇನ್ನು ಶುಭ್ಮನ್ ಗಿಲ್ ಅವರ ಈ ಭರ್ಜರಿ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 310 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ಶುಭ್ಮನ್ ಗಿಲ್ (110) ಜೊತೆ ರವೀಂದ್ರ ಜಡೇಜಾ (41) ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಇಬ್ಬರು ದ್ವಿತೀಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಲಿದ್ದಾರೆ.