AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಡೇ-ನೈಟ್ ಟೆಸ್ಟ್​​ಗೆ ಶುಭ್​​ಮನ್ ಗಿಲ್ ಅನುಮಾನ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 1-0 ಅಂತರದಿಂದ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟೆಸ್ಟ್​​ಗೆ ಸಜ್ಜಾಗುತ್ತಿದೆ.

ಝಾಹಿರ್ ಯೂಸುಫ್
|

Updated on: Nov 28, 2024 | 8:06 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​​ನ ಓವಲ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಡೇ-ನೈಟ್ ಟೆಸ್ಟ್. ಹೊನಲು-ಬೆಳಕಿನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​​ಮನ್​ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ.

1 / 5
ಇದಕ್ಕೂ ಮುನ್ನ ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಿಂದ ಗಿಲ್ ಹೊರಗುಳಿದಿದ್ದರು. ಫೀಲ್ಡಿಂಗ್ ಅಭ್ಯಾಸದ ವೇಳೆ ಗಿಲ್ ಅವರ ಎಡಗೈ ಹೆಬ್ಬೆರಳು ಮುರಿತಕ್ಕೊಳಗಾಗಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಅಡಿಲೇಡ್ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿತ್ತು.

2 / 5
ಆದರೀಗ ಅವರು ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ನವೆಂಬರ್ 30 ರಿಂದ ಕ್ಯಾನ್‌ಬೆರಾದಲ್ಲಿ ಶುರುವಾಗಲಿರುವ ಪ್ರೆಸಿಡೆಂಟ್ ಇಲೆವೆನ್​ ವಿರುದ್ದದ ಅಭ್ಯಾಸ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಅತ್ತ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳಲು ವೈದ್ಯರು 2 ವಾರಗಳ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್​ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಇನ್ನು ಗಿಲ್ ಹೊರಗುಳಿದರೆ ಅವರ ಸ್ಥಾನದಲ್ಲಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳಲಿದ್ದಾರೆ.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

5 / 5
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!